ರಾಯಚೂರು,ಮೇ.೧೩-ಸಿಡಿಲು ಬಡಿದು ಒಂದು ಎತ್ತು ಹಾಗೂ ಓರ್ವ ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಹರ್ವಾಪುರ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ರಾಮಣ್ಣ ಕುರುಬರ (38)ಸಿ ಎಂದು ಗುರುತಿಸಲಾಗಿದೆ. ಎಂದಿನಂತೆ ಜಮೀನು ಕೆಲಸಕ್ಕೆ ಹೊಲಕ್ಕೆ ಮರಳಿ ಬರುತ್ದಿದ್ದಾಗ ಸಂಜೆ ಧಾರಾಕಾರ ಮಳೆ ಸುರಿದಿದೆ.ಗಿಡದ ಆಸರೆಗೆ ನಿಂತಾಗ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಎತ್ರು ಸಹ ಬಲಿಯಾಗಿದೆ.