ರಾಯಚೂರು,ಏ.೨- ನಾರಾಯಣ ಬಲದಂಡೆ ಕಾಲುವೆ ನೀರು ಹರಿಸುವಂತೆ ಒತ್ತಾಯಿಸಿ ಗಬ್ಬೂರು ಗ್ರಾಮದಿಂದ ಪಾದಯಾತ್ರೆ ಪ್ರಾರಂಭಿಸಿದ್ದ ದೇವದುರ್ಗ ಶಾಸಕಿ ಜಿ.ಕರೆಮ್ಮ ನಾಯಕ ಮಾರ್ಗ ಮಧ್ಯೆ ಅಸ್ವಸ್ಥಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪಾದಯಾತ್ರೆ ಮುಂದುವರೆಸಿದ್ದಾರೆ.
ಬಿರು ಬಿಸಿಲಿನಲ್ಲಿ ಬೇಸಿಗೆ ತಾಪಕ್ಕೆ ನಿತ್ರಾಣಗೊಂಡಿದ್ದರಿಂದ
ಕೂಡಲೇ ಆ್ಯಂಬುಲೇನ್ಸನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಕಲ್ಮಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಒದಗಿಸಲಾಯಿತು.
ಕೆಲ ಕಾಲ ವಿಶ್ರಾಂತಿ ಪಡೆದು ಮತ್ತೆ ಪಾದಯಾತ್ರೆ ಮುಂದುವರಿಸಿದ್ದು ನಾಳೆ ರಾಯಚೂರು ನಗರ ಪ್ರವೇಶಿಸಲಿದೆ. ನೂರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ