ರಾಯಚೂರು.ಡಿ.ದೇವರಾಜು ಅರಸು ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಸರಬ ರಾಜು ಮಾಡಬೇಕು, ಶುದ್ಧ ಕುಡಿಯುವ ನೀರು ಪೂರೈಸಬೇಕು ಹಾಗೂ ಸ್ವಚ್ಛತೆ ಕಾಪಾಡುವುದು ಸೇರಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸ ಬೇಕೆಂದು ಮಾನ್ಯ ಜಿಲ್ಲಾ ಪಂಚಾಯತ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಾಂಡ್ವೆ ರಾಹುಲ್ ತುಕಾರಾಮ ರವರು ನಿರ್ದೇಶನ ನೀಡಿದರು.
ಸಿಂಧನೂರು ತಾಲೂಕು ವ್ಯಾಪ್ತಿಯ ಬರುವ ಜವಳಗೇರಾ ಗ್ರಾ.ಪಂ,ಯ ಡಿ,ದೇವರಾಜ ಅರಸು ಹಿಂದುವಳಿದ ವರ್ಗಗಳ ಇಲಾಖೆ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ವಿವಿಧ ತರಗತಿಗಳ ಕೋಣೆಗಳಿಗೆ ತೆರಳಿ ವೀಕ್ಷಣೆ ಮಾಡಿ, ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವದನ್ನು ಪರಿಶೀಲಿಸಿದರು. ನಂತರ ಶಾಲೆಯಲ್ಲಿ ಶಿಕ್ಷಕರ ಲಭ್ಯ ಇರುವದನ್ನು ಮಾಹಿತಿ ಪಡೆದುಕೊಂಡರು. ಶಾಲೆಯ ಆವರಣದಲ್ಲಿರುವ ಕುಡಿಯುವ ನೀರಿನ ಘಟಕ ಸರಿಪಡಿಸುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಜವಳಗೇರಾ ಗ್ರಾಮದಲ್ಲಿ SBM ರಡಿ ಬೂದು ನೀರು ನಿರ್ವಹಣೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಕೆರೆಗಳನ್ನು ಆದ್ಯತೆ ಮೇರಿಗೆ ಸಂಪೂರ್ಣವಾಗಿ ತುಂಬಿಸಿಕೊಳ್ಳಲು ಹಾಗೂ ಯಾವುದೇ ಕಾರಣಕ್ಕೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮ ಜರುಗಿಸುವಂತೆ ಗ್ರಾಕುನಿ ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಹಾಗೂ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. RH2 ರಲ್ಲಿ ಡಿಜಿಟಲ್ ಗ್ರಂಥಾಲಯ ಭೇಟಿ ಪರಿಶೀಲನೆ ನಡೆಸಿದರು.
ಕೆರೆ ವೀಕ್ಷಣೆ ಮಾಡಿ ನೀರಿನ ಮಟ್ಟ ಇನ್ನೀತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಆರ್,ಎಚ್,ಕ್ಯಾಂಪ್ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಬಿಸಿಯೂಟದ ಕೋಣೆ, ಶಾಲಾ ಬೋಜನಾಲಯ ಕಾಮಗಾರಿ ವೀಕ್ಷಣೆ ಮಾಡಿದರು. ನಂತರ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿ ಮಧ್ಯಾಹ್ನದ ಬಿಸಿಯೂಟ ಸರ್ಮಪಕವಾಗಿ ನೀಡುತಿದ್ದಾರೆಯೇ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡರು. ಶಿಕ್ಷರು ಪಾಠ ಚೆನ್ನಾಗಿ ಬೋಧನೆ ಮಾಡುತ್ತಿದ್ದಾರೆಯೆ ಎನ್ನುವುದನ್ನು ತಿಳಿದಿಕೊಂಡರು. ಶಾಲೆಯ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದರು.
ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಳದ ಸಂಪರ್ಕ ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು. ನಳದ ಸಂಪರ್ಕ ಕಲ್ಪಿಸಲು ಗುಣಮಟ್ಟದ ಪೈಪುಗಳನ್ನು ಅಳವಡಿಸಬೇಕು. ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕೆಂದು ಇಇ ರವರಿಗೆ ತಿಳಿಸಿದರು.ನಂತರ ಕೂಸಿನ ಮನೆ ಕೇಂದ್ರದ ಕಟ್ಟಡಕ್ಕೆ ಪೇಟಿಂಗ್ ಮಾಡುತ್ತಿರುವುದನ್ನು ಗಮನಿಸಿ ಕೂಡಲೇ ಪ್ರಾರಂಭಿಸಬೇಕೆಂದರು. ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿದರು. ಗ್ರಂಥಾಲಯ ಕಟ್ಟಡ ವೀಕ್ಷಣೆ ಮಾಡಿದರು. ಅಪೌಷ್ಟಿಕ ಹಾಗೂ ಕಡಿಮೆ ತೂಕದ ಶಿಶುಗಳ ಆರೈಕೆ ಮತ್ತು ಅವರ ಆರೋಗ್ಯ ಸುಧಾರಣೆ ಬಗ್ಗೆ ಕ್ರಮ ಕೈಗೊಳ್ಳಲು ICDS ಅಧಿಕಾರಿಗಳಿಗೆ ಸೂಚಿಸಿದರು. ನರೇಗಾ ಅಡಿ RH2 ಪ್ರೌಢ ಶಾಲೆಯಲ್ಲಿ ಶಾಲಾ ಆಟದ ಮೈದಾನ ಕಾಮಗಾರಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿಗಳು ಶಶಿಕಾಂತ ಶಿವಪೂರೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಚಂದ್ರಶೇಖರ, ಕಾರ್ಯನಿರ್ವಾಹಕ ಅಭಿಯಂತರರು (ಪಂ.ರಾ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಅಭಿಯಂತರು, ಸಹಾಯಕ ನಿರ್ದೇಶಕರು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾ.ಪಂ ಸಿಬ್ಬಂದಿ ವರ್ಗದವರು ಇದ್ದರು.