Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Local News

ಹೀಟ್ ವೇವ್‌ನಿಂದ ಪಾರಾಗಲು ಮುಂಜಾಗೃತಾ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ

ಹೀಟ್ ವೇವ್‌ನಿಂದ ಪಾರಾಗಲು ಮುಂಜಾಗೃತಾ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ

ರಾಯಚೂರು:- ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವು ದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿ ಕಾರವು ನೀಡಿದ ಮುಂಜಾಗ್ರತಾ ಕ್ರಮಗಳನ್ನು ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಾರ್ವಜನಿಕರು ರೇಡಿಯೋ,ಟಿವಿ, ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊ ಳ್ಳಬೇಕು, ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋ ಪಿ, ಬೂಟುಗಳು ಅಥವಾ ಚಪ್ಪಲಗಳನ್ನು ಬಳಸಬೇಕು. ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ, ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗುವುದು ಉತ್ತಮ
ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾ ಯ ಮಾಡುತ್ತದೆ. ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ. ಆದಷ್ಟು ಫ್ಯಾನಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀ ರಿನಲ್ಲಿ ಸ್ನಾನ ಮಾಡಿ. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿ ಯುವ ನೀರನ್ನು ಒದಗಿಸಬೇಕು ಎಂದಿದ್ದಾರೆ.
ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆ ಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು. ನವಜಾತ ಶಿಶುಗಳು, ಹಿರಿಯ ನಾಗರಿಕರು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಅರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.
ನರೇಗಾ ಯೋಜನೆಯಡಿಯಲ್ಲಿ ಕೆಲಸ ನಡೆಯು ತ್ತಿರುವ ಎಲ್ಲಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಹಾಗೂ ಓ.ಆರ್.ಎಸ್ ಪ್ಯಾಕೆಟ್ ಗಳ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಓ.ಆರ್.ಎಸ್ ಪ್ಯಾಕೆಟ್ ಗಳನ್ನು ಕಡ್ಡಾಯವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು.
ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಗಳಲ್ಲಿ ಕಟ್ಟಡ ಕಾರ್ಯ ನಡೆಯುವ ಸ್ಥಳಗಳಲ್ಲಿ ಕೆಲಸಗಾರರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರಿನ ಹಾಗೂ ಓ.ಆರ್.ಎಸ್ ಪ್ಯಾಕೆಟ್ ಗಳ ವ್ಯವಸ್ಥೆಯನ್ನು ಕಡ್ಡಾಯವಾಗಿ ಎಲ್ಲಾ ಗುತ್ತಿಗೆದಾರರು ಮಾಡಬೇಕು. ಕೆಲಸಗಾರರು ಪ್ರತಿ ೨೦ ನಿಮಿಷಗಳಿಗೊಮ್ಮೆ ಒಂದು ಗ್ಲಾಸ್ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿಯುವಂತೆ ಗಮನ ವಹಿಸಬೇಕು.
ಕೆಲಸಗಾರರು ನೇರವಾದ ಸೂರ್ಯನ ಬೆಳಕಿನಲ್ಲಿ ಕೆಲಸ ನಿರ್ವಹಿಸದಂತೆ ಎಚ್ಚರ ವಹಿಸಬೇಕು. ಕೆಲಸಗಾರರಿಗೆ ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನೂಕೂಲವಾಗುವಂತೆ ತಾತ್ಕಾಲಿಕ್ ಶೆಡ್ ಗಳನ್ನು ಕಡ್ಡಯವಾಗಿ ನಿರ್ಮಿಸಬೇಕು.
ರಾಯಚೂರು ಜಿಲ್ಲೆಯ ಎಲ್ಲಾ ಸಾರ್ವಜನಿಕರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ ಈ ಎಲ್ಲಾ ಸಲಹೆ ಸೂಚನೆಗಳನ್ನು ಪಾಲಿಸಬೇಕು ಹಾಗೂ ಮೇ.೭ರಂದು ಲೋಕಸಭಾ ಚುನಾವಣಾ ಕಾರ್ಯ ಇರುವುದರಿಂದ ಜಿಲ್ಲೆಯ ಎಲ್ಲಾ ನಾಗರಿಕರು ತಪ್ಪದೇ ಹಾಗೂ ಕಡ್ಡಾಯವಾಗಿ ಸುರಕ್ಷಿತವಾಗಿ ಬಂದು ಮತ ಚಲಾಯಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Megha News