Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local News

ಕೃಷ್ಣ ನದಿಗೆ ಹೆಚ್ಚಿನ ನೀರು ಬಿಡುಗಡೆ, ಜಿಲ್ಲೆಯಲ್ಲಿ ಮಳೆ ಹಿನ್ನಲೆಯಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ: ಜಿಲ್ಲಾಧಿಕಾರಿ ನಿತೀಶ್ ಕೆ.

ಕೃಷ್ಣ ನದಿಗೆ ಹೆಚ್ಚಿನ ನೀರು ಬಿಡುಗಡೆ, ಜಿಲ್ಲೆಯಲ್ಲಿ ಮಳೆ ಹಿನ್ನಲೆಯಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ: ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು. ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದುವಾರದಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆÀ ಹಿನ್ನೆಲೆಯಲ್ಲಿ, ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಬಿಡುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ವರದಿಯಂತೆ ಇನ್ನೂ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ನಿತೀಶ್ ಕೆ. ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಭಾರಿ ಮಳೆ ಅಥವಾ ಪ್ರವಾಹ ಕುರಿತು ಮುಂಜಾಗೃತೆ ತೆಗೆದುಕೊಳ್ಳುವುದು ಅವಶ್ಯಕತೆ ಇರುತ್ತದೆ. ಆದುದರಿಂದ ರಾಯಚೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹ ಕುರಿತು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಈ ಕೆಳಗಿನಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮಗಳು: ಜಿಲ್ಲಾ, ತಾಲೂಕು, ಹೋಬಳಿ ಅಥವಾ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿ ಅಥವಾ ಸಿಬ್ಬಂಧಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ ಅಥವಾ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸುವುದು.
ಭಾರಿ ಮಳೆಯಿಂದ ಉಂಟಾಗುವ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ನಗರ ಮತ್ತು ಗ್ರಾಮೀಣ ಪ್ರದೇಶದ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು, ಅವಶ್ಯಕವೆನಿಸಿದರೆ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸುವುದು. ಅಲ್ಲದೆ ನದಿ, ಹಳ್ಳ ಅಥವಾ ಕೆರೆ ದಡದಲ್ಲಿ ಬಟ್ಟೆ ತೊಳಿಯುವುದು, ಈಜಾಡುವುದು, ದನ, ಕರುಗಳನ್ನು ಮೆಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮವಹಿಸುವುದು.
ನದಿ, ಹಳ್ಳ, ಕೆರೆ ದಡದಲ್ಲಿರುವ ಗುಡಿ, ಮಸೀದಿ, ಚರ್ಚ್ಗಳಲ್ಲಿ ಪೂಜೆ ಸಲ್ಲಿಸುವವರನ್ನು ಮನಒಲಿಸಿ ನದಿ, ಹಳ್ಳ, ಕೆರೆ ದಡದಲ್ಲಿ ತೆರಳದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ. ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚರಿಕೆಯ ಕ್ರಮ ತೆಗೆದುಕೊಳ್ಳವುದು ಅಥವಾ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಾಗೃತಿ ಮೂಡಿಸುವುದು.
ನದಿ ದಡದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ ಅಥವಾ ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೋ ಅಥವಾ ಸೆಲ್ಫಿಗಳನ್ನು ತೆಗೆಯದಂತೆ ಕ್ರಮವಹಿಸುವುದು. ಮಳೆ ಅಥವಾ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು ಅಥವಾ ಮೈಕ್ ಮೂಲಕ ಜಾಗೃತಿ ಮೂಡಿಸುವುದು.
ಭಾರಿ ಮಳೆ ಅಥವಾ ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸುವುದು. ರಾಜ್ಯ, ಜಿಲ್ಲಾಡಳಿತ, ತಾಲೂಕಾಡಳಿತ ದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಪ್ರತಿ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು. ಜಿಲ್ಲೆಯಲ್ಲಿ ಅತಿಯಾಗಿ ಮಳೆ ಸುರಿಯುವ ಸಂಭವವಿರುವುದರಿAದ ಸಾರ್ವಜನಿಕರು ಅಥವಾ ಪ್ರವಾಸಿಗರು ನದಿಗಳ, ತೋಡುಗಳ ಮತ್ತು ವಿದ್ಯುತ್ ಕಂಬ ಅಥವಾ ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬAಧಪಟ್ಟ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು. ಜಿಲ್ಲೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿ ಅಥವಾ ಸಿಬ್ಬಂಧಿಗಳಿಗೆ ಪ್ರವಾಹ/ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲು ಸೂಚಿಸಲಾಗಿದ್ದು, ಈ ವಿಷಯದಲ್ಲಿ ನಿರ್ಲಕ್ಷ್ಯವಹಿಸುವಂತಹ ಅಧಿಕಾರಿ ಅಥವಾ ಸಿಬ್ಬಂದಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ-೨೦೦೫ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Megha News