ರಾಯಚೂರು. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ 2025ರ ಜನವರಿ 1ರ ಅರ್ಹತಾ ದಿನಾಂಕದೊಂದಿಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಘೋಷಿಸಲಾಗಿದ್ದು, ಸಾರ್ವಜನಿಕರು ತಿದ್ದುಪಡಿಗಳು, ಹೊಸ ನೋಂದಣಿ, ಮೃತ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದುಹಾಕುವಿಕೆ, ಮತ್ತು 18ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ, ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು (ಃಐಔ) ಮನೆ-ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಮತದಾರರ ನೋಂದಣಿ ಕಾರ್ಯಕ್ರಮವನ್ನು ಆರಂಭಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
ಸಾರ್ವಜನಿಕರು ಈ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ತಿದ್ದುಪಡಿ, ಸೇರ್ಪಡೆ ಮತ್ತು ತೆಗೆದುಹಾಕುವಿಕೆಗಳಿಗೆ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ನಮೂನೆ-6, 7, ಮತ್ತು 8 ಅನ್ನು ಕ್ರಮವಾಗಿ ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿ/ ಸ್ಥಳಾಂತರಕ್ಕಾಗಿ ಬಳಸಬಹುದಾಗಿದೆ.
ಮತಗಟ್ಟೆ ಮಟ್ಟದ ಅಧಿಕಾರಿಗಳು ಈ ಅವಧಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಅರ್ಜಿಗಳನ್ನು ಸ್ವೀಕರಿಸುತ್ತಾರೆ. 17+ ಮತ್ತು 18ವರ್ಷ ತುಂಬಿದ ವಯಸ್ಕರು ಮತ್ತು ಮತದಾರರ ಪಟ್ಟಿಯಲ್ಲಿ ನೋಂದಾಯಿಸದವರು ನಮೂನೆ-6ರ ಮೂಲಕ ಹೆಸರು ಸೇರಿಸಬಹುದು. ಹಾಗೂ ಮೃತ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ನಮೂನೆ-7 ಅನ್ನು ಬಳಸಬಹುದು.
ನೋಂದಾಯಿತ ಮತದಾರರ ಹೆಸರು, ಲಿಂಗ, ವಯಸ್ಸು, ಮನೆ ನಂಬರ್ ಇತ್ಯಾದಿಗಳ ತಿದ್ದುಪಡಿ ಮಾಡಲು ನಮೂನೆ-8 ಅನ್ನು ಬಳಸಬಹುದಾಗಿದೆ. ಮತದಾರರು ತಮ್ಮ ವಾಸದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ವರ್ಗಾವಣೆ ಬಯಸಿದರೆ ನಮೂನೆ-8 ಅನ್ನು ಬಳಸಬಹುದಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಅವಧಿ 2024ರ ಅಕ್ಟೋಬರ್ 29 ರಿಂದ 2024ರ ನವೆಂಬರ್ 28ರವರೆಗೆ. ಈ ಅವಧಿಯಲ್ಲಿ ಃಐಔ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ 6, 7, ಮತ್ತು 8ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಅವಧಿಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.,,