Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಬುದ್ಧ,ಬಸವಣ್ಣನ ನಂತರ ಸಮಾನತೆಗೆ ಡಾ.ಅಂಬೇಡ್ಕರ್ ಹೋರಾಟ: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ತನಿಖೆ- ಸಿದ್ದರಾಮಯ್ಯ

ಬುದ್ಧ,ಬಸವಣ್ಣನ ನಂತರ ಸಮಾನತೆಗೆ ಡಾ.ಅಂಬೇಡ್ಕರ್ ಹೋರಾಟ: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ತನಿಖೆ- ಸಿದ್ದರಾಮಯ್ಯ

ಬೆಂಗಳೂರು : ಡಿಸೆಂಬರ್ – 06: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ ll ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದರು

*ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ*
ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ . ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದರು.

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು
ಕೇವಲ ದಲಿತರಿಗೆ ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು.ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.

ದ್ವೇಷ ಸಲ್ಲದು:ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ.ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು.

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ . ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ ಎಂದರು. ಅದೇ ರೀತಿಯಲ್ಲಿ ಸಂವಿಧಾನ , ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

ಬಳ್ಳಾರಿಯಲ್ಲಿ ಬಾಣಂತಿ ಸಾವು:ಪರಿಶೀಲನೆ:
ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿಯ ಸಾವಿಗಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದರು.

Megha News