ರಾಯಚೂರು. ೨೦೨೩-೨೪ನೇ ಸಾಲಿನಲ್ಲಿ ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು, ಸರ್ಕಾರದಿಂದ ಬರ ಪರಿಹಾರದ ಮೊತ್ತವನ್ನು ಸಾರ್ವಜನಿಕರಿಗೆ / ರೈತರಿಗೆ ಬರ ಪರಿಹಾರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಆದರೆ, ಕೆಲ ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರ / ರೈತರ ಪರಿಹಾರದ ಮೊತ್ತವನ್ನು ಅವರ ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ಸಾರ್ವಜನಿಕರು / ರೈತರು ತಿಳಿಸಿರುತ್ತಾರೆ. ರಾಯಚೂರು ಜಿಲ್ಲೆಯಲ್ಲಿನ ರೈತರ ಬ್ಯಾಂಕ್ ಖಾತೆಗಳಿಗೆ ಬರ ಪರಿಹಾರದ ಮೊತ್ತವು ಸರ್ಕಾರದಿಂದ ನೇರವಾಗಿ ಡಿ.ಬಿ.ಟಿ ಮೂಲಕ ಸಂದಾಯವಾಗುತ್ತಿದ್ದು, ಸದರಿ ಮೊತ್ತವನ್ನು ಯಾವುದೇ ಕಾರಣಕ್ಕಾಗಿ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳತಕ್ಕದ್ದಲ್ಲ ಎಂದು ಎಲ್ಲಾ ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡತಕ್ಕದ್ದು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಪ್ರಕಟಣೆಯ ಮೂಲಕ ಸೂಚನೆ ನೀಡಿದ್ದಾರೆ.
Megha News > Local News > ಬರ ಪರಿಹಾರದ ಮೊತ್ತವನ್ನು ಸಾಲಕ್ಕಾಗಿ ಕಡಿತಗೊಳಿಸಕೂಡದು: ಡಿ.ಸಿ ಎಲ್.ಚಂದ್ರಶೇಖರ ನಾಯಕ