Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

Local News

ಮಾದಕ ವಸ್ತುಗಳು, ಸೈಬರ್ ಅಪರಾಧ ಕುರಿತು ಜಾಗೃತಿ ಜಾಥಕ್ಕೆ ಚಾಲನೆ

ಮಾದಕ ವಸ್ತುಗಳು, ಸೈಬರ್ ಅಪರಾಧ ಕುರಿತು ಜಾಗೃತಿ ಜಾಥಕ್ಕೆ ಚಾಲನೆ

ರಾಯಚೂರು: ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ. ಅದರಲ್ಲೂ ಯುವಕರಲ್ಲಿ ಈ ವಸ್ತುಗಳ ಸೇವನೆ ಹೆಚ್ಚಾಗುವ ಹಿನ್ನಲೆ ಪ್ರತಿಯೊಬ್ಬರು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳು ಹಾಗೂ ಸೈಬರ್ ಅಪರಾಧಗಳ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಾದಕ ವಸ್ತುಗಳನ್ನು ಬಳಸುವುದರಿಂದ ವ್ಯಕ್ತಿಯ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವು ಹದಗೆಡುತ್ತದೆ. ಅದಲ್ಲದೇ ಮಾದಕ ವಸ್ತುಗಳ ಬಳಕೆಯು ಅಪರಾಧವಾಗಿದೆ. ಮಾದಕ ವಸ್ತುಗಳ ಬಳಕೆಯಿಂದ ಸುತ್ತಮುತ್ತಲಿನ ಪರಿಸರ ಹಾಗೂ ಅಕ್ಕಪಕ್ಕದ ವ್ಯಕ್ತಿಗಳ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳನ್ನು ಬಳಸದಂತೆ ಪ್ರತಿಯೊಬ್ಬರು ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದಾಗುವ ಹಾನಿಗಳ ಬಗ್ಗೆ ಹೆಚ್ಚಾಗಿ ಯುವ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಇಂದು ಹಾಗೃತಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರು ಮಾದಕ ವಸ್ತುಗಳ ಬಳಕೆಯನ್ನು ತೊರೆದು ಉತ್ತಮ ಜೀವನ ನಡೆಸಲು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಶಿವಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ರಾಯಚೂರು ತಹಶೀಲ್ದಾರ ಸುರೇಶ ವರ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನಕುಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು‌ ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha News