ರಾಯಚೂರು. ಅಲ್ಪ ಸಂಖ್ಯಾಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿ ಎಲ್ಲಾ ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುವುದು, ವಿದ್ಯಾರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ, ಆಹಾರ ಸಂಬಂಧಿಸಿ ದಂತೆ ನಿತ್ಯ ಪರಿಶೀಲನೆ ನಡೆಸಲಾಗುತ್ತದೆ ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.
ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಅಲ್ಪ ಸಂಖ್ಯಾಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳ ಆಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಆರೋಗ್ಯ ಸಮಸ್ಯೆ ಕುರಿತು ವಿಚಾರಿಸಿದರು,
ವಸತಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಲು ಸೂಚನೆ ನೀಡಲಾಗಿದೆ, ಮುಂದೆ ಇಂತಹ ಘಟನೆ ನಡೆಯುವುದಿಲ್ಲ, ನಿತ್ಯ ಆಹಾರ ಬಗ್ಗೆ ನೀಡುವ ಬಗ್ಗೆ ಕಾಳಜಿ ವಹಿಸ ಲಾಗುತ್ತದೆ, ವಿದ್ಯಾರ್ಥಿ ಭಯ ಪಡುವ ಅವಶ್ಯಕತೆ ಇಲ್ಲ, ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ, ನಿಮ್ಮ ಶಾಲೆಗೆ ವೈದ್ಯರು ಬಂದು ತಪಾಸಣೆ ಮಾಡುತ್ತಾರೆ, ಈ ಬಗ್ಗೆ ಸ್ಥಳಕ್ಕೆ ತೆರಳಿ ಆರೋಗ್ಯ ತಪಾಸಣೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ಪಾಂಡ್ವೆ ತುಕಾರಾಂ, ಎಸ್‌ಪಿ, ಸೇರಿದಂತೆ ಇಲಾಖೆ ಅಧಿಕಾರಿಗಳು ಇದ್ದರು.