ರಾಯಚೂರು: ಕೃಷಿಕರು ಉಪ ಕಸುಬುಗಳಾದ ಕುರಿ ಸಾಕಾಣಿಕೆ, ಹೈನುಗಾರಿಕೆ, ಕೋಳಿ ಸಾಕಾ ಣಿಕೆ, ಪೋಷಣೆ ಕೈ ತೋಟ ಮಾಡಿ ಆದಾಯ ವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಸಲಹೆ ನೀಡಿದರು.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಕೃಷಿ ಸಖಿಯರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೃಷಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕೃಷಿ ಸಖಿಯರು ಆರು ದಿನಗಳ ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ಗ್ರಾಮ ಮಟ್ಟದಲ್ಲಿ ರೈತರಿಗೆ ತಿಳಿಸಬೇಕು. ಹೊಸ ತಂತ್ರಗಳ ಮಾಹಿತಿ ಪಡೆದು ರೈತರಿಗೆ ವಿವರಿಸಬೇಕು’ ಎಂದು ಹೇಳಿದರು.
ರೈತ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಯಶ ಸಾಧಿಸಲು ಸಾಧ್ಯವಿದೆ. ಕೃಷಿಯ ಜತೆಗೆ ಜಾನುವಾರು ಪಾಲನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆ’ ಎಂದು ಹೇಳಿದರು.
‘