ಮಸ್ಕಿ. ಸಾಲಮಾಡಿ ಬೆಳೆ ಬೆಳೆದ ರೈತ ಮಳೆ ಯಾಗದೇ ಇರುವುದರಿಂದ ಬೆಳೆ ಹಾಳಾಗಿದ್ದು, ಸಾಲಬಾಧೆಯಿಂದ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಾರಲದಿನ್ನಿ ತಾಂಡಾ ಗ್ರಾಮದಲ್ಲಿ ನಡೆದಿದೆ.
ರೈತ ಚೆಂದಪ್ಪ (60) ಎಂದು ಗುರುತಿಸಲಾಗಿದೆ.
ಮಳೆಯಿಲ್ಲದೆ ತೊಗರಿ ಬೆಳೆ ನಾಶಗೊಂಡ ಹಿನ್ನೆಲೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ ಎನ್ನಲಾಗಿದೆ.
ಗ್ರಾಮದಲ್ಲಿ 3 ಎಕರೆ ಭೂಮಿ ಇದ್ದು, ಮಸ್ಕಿ ಪಟ್ಟಣದ ಎಸ್‌ಬಿಐ ಬ್ಯಾಂಕಿನಲ್ಲಿ 2.40 ಲಕ್ಷ, ಹಾಗೂ ಇತರೆ ಕಡೆ 4ಲಕ್ಷ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆ ನಡೆಸಿದ್ದ. ಮಳೆ ನಿರೀಕ್ಷೆಯಲ್ಲಿ ದ್ದ ರೈತ ಚಂದಪ್ಪ ಸಾಲ ಮಾಡಿ ತನ್ನ ಮೂರು ಎಕರೆ ಜಮೀನಿನಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿ ದ್ದರು. ಆದರೆ ಮಳೆ ಬಾರದ ಹಿನ್ನೆಲೆ ಉಂಟಾದ ಬರಕ್ಕೆ ತೊಗರಿ ಬೆಳೆ ಒಣಗಿ ಹೋಗಿವೆ. ಇದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಮಸ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.