ರಾಯಚೂರು. ವಿವಿಧೆಡೆ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಡಳಿತ, ತಾಲೂಕ ಆಡಳಿತ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಮತ್ತು ಪೊಲೀಸ್ ಇಲಾಖೆರವರ ಸಂಯೋಗದಲ್ಲಿ ರಾಯಚೂರು ತಾಲೂಕಿನ ವಿವಿಧ ಹೋಟೆಲ್, ಗ್ಯಾರೇಜ್, ಬೇಕರಿ, ಅಂಗಡಿ, ಬಾಸಿರೆಸ್ಟೋರೆಂಟ್ ಮತ್ತು ಇನ್ನಿತರ ವಾಣಿ ಉದ್ದಿಮೆಗಳಲ್ಲಿ ತಪಾಸಣೆ ಕೈಗೊಂಡಾಗ ಆಟ ಟಿಫನ್ ಮತ್ತು ಫಾಸ್ಟ್ ಫುಡ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ.
ಮಕ್ಕಳ ಕಲ್ಯಾಣ ಸಮಿತಿ, ರಾಯಚೂರಿಗೆ ಒಪ್ಪಿಸಲಾಗಿದ್ದು, ಮಗುವನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಸೆಂಟರ್‌ನ ಪಾಲೀಕರ ವಿರುದ್ಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಬಾಲಕಾರ್ಮಿಕ ಮತ್ತು ಶೋಧ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಬಾಲಕಾರ್ಮಿಕ ಮತ್ತು ಕಿಶೋರಿ ಕಾರ್ಮಿಕ (ನಿಷೇಧ ಮತ್ತು ನಿಯಂತ್ರ) ತಿದ್ದುಪಡಿ ಕಾಯ್ದೆ 201 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ಮಾಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ ದ. 50,000 ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ, ಮಕ್ಕಳನ್ನು ಕೃಷಿ ಅಗಳಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಕಾರಣ ಮಕ್ಕಳನ್ನು ದುಡಿಸಿಕೊಳ್ಳಬಾರದೆಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ
ಮಂಜುನಾಥರೆಡ್ಡಿ, ಕಾರ್ಮಿಕ ನಿರೀಕ್ಷಕ ಎನ್.ವೆಂಕಟಸ್ವಾಮಿ,ತಾಲೂಕ ದೈಹಿಕ ಶಿಕ್ಷಣಾಧಿಕಾರಿ, ಉಸೇನ್ ಬಾಷಾ,ಎಎಸ್ಐ
ಜಗನ್ನಾಥ ಸೇರಿದಂತೆ ಅನೇಕರು ಇದ್ದರು.