ರಾಯಚೂರು. ಜಿಲ್ಲೆಯಲ್ಲಿ ವೈದ್ಯರು ಸೇರಿದಂತೆ 4 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಮಾನವಿ ತಾಲೂಕಿನ ಬ್ಯಾಗವಾಟ್, ಮಾಡಗಿರಿ, ಮಾನವಿ ಪಟ್ಟಣ ಹಾಗೂ ರಾಯಚೂರಿನ ವೈದ್ಯರೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಡಪಟ್ಟಿದೆ. ನಾಲ್ವರಿಗೆ ಅಗತ್ಯ ಚಿಕಿತ್ಸೆ ನೀಡು ತ್ತಿದ್ದು, ಇವರ ಸ್ಯಾಂಪಲ್ ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.
ಜಿಲ್ಲೆಯಲ್ಲಿ ಈವರೆಗೆ 582 ಜನರನ್ನು ಪರೀಕ್ಷೆಗೆ ಒಳಪಡಿಸಿದ್ದು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ನೆಗಡಿ, ಕೆಮ್ಮು, ಜ್ವರ ರೋಗಿಗಳ ಆಧರಿಸಿ ಆಯಾ ಪ್ರದೇಶದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಪಾಸಿಟಿವ್ ಬಂದವರಿಗೆ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ರಾಯಚೂರಿನ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಪಾಸಿಟಿವ್ ಇರುವ ರೋಗಿಗಳಿಗೆ ಚಿಕಿತ್ಸೆ ನೀಡಲು 20 ಐಸಿಯು, 30 ಆಮ್ಲಜನಕ ಸಹಿತ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಅದೇರೀತಿ ಪ್ರತಿ ತಾಲೂಕಾ ಆಸ್ಪತ್ರೆಗಳಲ್ಲಿ ಸಹ ತಲಾ 10 ಐಸಿಯು ಹಾಗೂ ಆಮ್ಲಜನಕ ಸಂಪರ್ಕವಿರುವ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿ ಕಾರಿ ತಿಳಿಸಿದ್ದಾರೆ.