ರಾಯಚೂರು. ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್ ನಂ.2ರ ಜಮೀನಿನ ಶೆಡ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಸಿಂಧನೂರು ಗ್ರಾಮೀಣ ಪೋಲಿಸ್ ಠಾಣೆ ಪೋಲಿಸ್ ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಎಎಎಸ್ಪಿ ಶಿವು ಕುಮಾರ, ಡಿವೈಎಸ್ಪಿ ಬಿಎಸ್ ತಳವಾರ, ಸಿಪಿಐ ವೀರಾರೆಡ್ಡಿ ಮಾರ್ಗದರ್ಶನದಲ್ಲಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಹ್ಮದ್ ಇಸಾಕ್, ಎಎಸ್ಪಿ ದೌಲಸಾಬ್, ಸಿಬ್ಬಂದಿ ರಾಘವೇಂದ್ರ, ಶರಣಬಸವ ತಿಪ್ಪಣ್ಣ, ಗೋಪಾಲ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ಆರೋಪಿಯಿಂದ 23 ಸಾವಿರ ಮೌಲ್ಯದ 2.61 ಕೆಜಿ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಸಿಂಧನೂರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.