Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ, 318 ಪಿಡಿಒ ಅಮಾನತುಗೊಳಿಸಿ ಸರ್ಕಾರ ಆದೇಶ

ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ, 318 ಪಿಡಿಒ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು. ಸ್ವಚ್ಛ ಭಾರತ ಮಿಷನ್ ಯೋಜನೆ ಯಡಿ ಗ್ರಾಮ ಪಂಚಾಯತಿ ಪಿಡಿಒಗಳು ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದೇ ಇರುವುದರಿಂದ ರಾಜ್ಯದಲ್ಲಿನ 318 ಪಿಡಿಒ ಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗ್ರಾಮೀಣ ಭಾಗದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಿಟಿಜನ್ ಪೋರ್ಟಲ್ ಮೂಲಕ ಸಲ್ಲಿಕೆಯಾದ ಬೇಡಿಕೆಗಳ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿಗಳನ್ನು ಸಿದ್ಧಪಡಿಸ ಲಾಗಿದೆ.
4.85 ಲಕ್ಷ ಶೌಚಾಲಯ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, 3.60 ಲಕ್ಷ ಶೌಚಾಲಯಗಳಿಗೆ ಅನುದಾನ ಬಿಡುಗಡೆ ಮಾಡಲಾಗಿತ್ತು. ಗ್ರಾಮೀಣ ಪ್ರದೇಶದ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಹಿಂದುಳಿದ ವರ್ಗಗಳು ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಪ್ರತಿ ಕುಟುಂಬಕ್ಕೂ ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಸರ್ಕಾರ 7,200 ರೂ. ಹಾಗೂ ರಾಜ್ಯ ಸರ್ಕಾರ 4,800 ರೂ. ಸೇರಿ 12 ಸಾವಿರ ರೂ. ಸಹಾಯಧನ ನೀಡುತ್ತಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ 15 ಸಾವಿರ ನಿಗದಿ ಮಾಡಲಾಗಿದೆ.
ಈ ಅನುದಾನವನ್ನು ನಿಗದಿತ ಅವಧಿ ಒಳಗೆ ಖರ್ಚು ಮಾಡದೇ ಇರುವ ಪಿಡಿಒಗಳನ್ನು ಅಮಾನತು ಮಾಡಲು ತಕ್ಷಣ ಕ್ರಮ ಕೈಗೊಳ್ಳು ವಂತೆ 30 ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪತ್ರ ಬರೆದಿದೆ.
318 ಪಂಚಾಯಿತಿಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಒಂದು ಶೌಚಾಲಯವನ್ನು ನಿರ್ಮಿಸದೆ ಅನುದಾನವನ್ನು ಹಾಗೆಯೇ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ 318 ಪಿಡಿಒಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.