ಮಾನ್ವಿ. ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ವಚ್ಚ ಭಾರತ ಮಿಷನ್ ಯೋಜನೆಯ ಅಡಿಯಲ್ಲಿ ನಿರ್ಮಿಸುತ್ತಿರುವ ಮಲತಾಜ್ಯ ನಿರ್ವಹಣಾ ಘಟಕ ಕ್ಕೆ ಜಿಪಂ ಸಿಇಒ ಪಾಂಡ್ವೇ ರಾಹುಲ್ ತುಕಾರಾಮ್
ಬೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಲೋಪವಾಗದಂತೆ, ವಿಳಂಬಕ್ಕೆ ಅವಕಾಶ ನೀಡದೇ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಸತೀಶ್ ಕುಮಾರ್, ತಾಂತ್ರಿಕ ಅಧಿಕಾರಿಗಳಾದ ರವಿಕುಮಾರ, ಮಯಾಂಕ್, ಮೂರನೇ ವ್ಯಕ್ತಿ ಗುಣಮಟ್ಟ ನಿಯಂತ್ರಣ ತಪಾಸಣಾ ತಂಡದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಸ್ಥಳದಲ್ಲಿ ಉಪಸ್ಥಿತರಿದ್ದರು.