ಬೆಂಗಳೂರು.ಕೋವಿಡ್‌ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಹೊರಡಿಸಿದೆ.
60 ವರ್ಷ ಮೇಲ್ಪಟ್ಟವರು ಮೂತ್ರಪಿಂಡ, ಹೃದಯ, ಯಕೃತ್ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರುವುದು.
ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್ ಧರಿಸುವುದು.
ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ.
ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಉತ್ತಮ.
ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವುದು.
ರಾಜ್ಯವೂ ಕೇರಳ ಮತ್ತು ತಮಿಳುನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು ಜ್ವರದ ಲಕ್ಷಣ ಇರುವ ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಲು ಸೂಚಿಸಿದೆ.