Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ವಾಹನ ಮಾಲೀಕರೆ HSRP ನಂಬರ್ ಪ್ಲೇಟ್ ಅಳವಡಿಸಲು ಇಲ್ಲಿದೆ ಸುಲಭ ವಿಧಾನ

ವಾಹನ ಮಾಲೀಕರೆ HSRP ನಂಬರ್ ಪ್ಲೇಟ್ ಅಳವಡಿಸಲು ಇಲ್ಲಿದೆ ಸುಲಭ ವಿಧಾನ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ.

ಹಳೆಯ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಕಾರ್ಯವಿಧಾನ
https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲ‌ರ್ ಸ್ಥಳವನ್ನು ಆಯ್ಕೆಮಾಡಿ.
HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
ನಿಮ್ಮ ಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
ಪ್ರಮುಖ ಅಂಶಗಳು

ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬ‌ರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.
ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಅಳವಡಿಕೆಗೆ ದಿನಾಂಕ: 17-11-2023 ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಸರ್ಕಾರ17-02-2024 ರವರೆಗೆ ವಿಸ್ತರಿಸಲಾಗಿದೆ.

Megha News