Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಫೆ.18 ರಿಂದ ವಿವಿಧ ಪರೀಕ್ಷೆಗಳು, ಮಹತ್ವದ ನಿಯಮಗಳು ಬಗ್ಗೆ ಮಾಹಿತಿ ಇಲ್ಲಿದೆ

ಫೆ.18 ರಿಂದ ವಿವಿಧ ಪರೀಕ್ಷೆಗಳು, ಮಹತ್ವದ ನಿಯಮಗಳು ಬಗ್ಗೆ ಮಾಹಿತಿ ಇಲ್ಲಿದೆ

ಬೆಂಗಳೂರು,: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ಪರೀಕ್ಷೆಗಳಿಗೆ ವಸ್ತ್ರ ಸಂಹಿತೆ ಮತ್ತು ಯಾವ ವಸ್ತುಗಳನ್ನು ತರಬಾರದು? ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.ಫೆಬ್ರವರಿ 18ರಂದು ಯುಪಿಎಸ್‌ಸಿ, ಕೆಎಎಸ್, ಎಸ್‌ಎಸ್‌ಸಿ, ಆರ್‌ಆರ್‌ಬಿ, ಬ್ಯಾಂಕಿಂಗ್ ಮತ್ತು ಗ್ರೂಪ್-ಸಿ ತರಬೇತಿಯ ಪ್ರವೇಶ ಪರೀಕ್ಷೆಗಳು ನಡೆಯುತ್ತವೆ.ಗೆಜೆಟೆಡ್ ಪ್ರೊಬೇಷನರ್ಸ್; 384 ಹುದ್ದೆ ಭರ್ತಿ, ಯಾವ ಇಲಾಖೆಗೆ ಎಷ್ಟು?

ಆದ್ದರಿಂದ ವಸ್ತ್ರ ಸಂಹಿತೆ, ನಿಷೇಧಿತ ವಸ್ತುಗಳು, ಅನುಮತಿಸಲಾದ ವಸ್ತುಗಳ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಪರೀಕ್ಷೆಗೆ ತೆರಳುವ ಅಭ್ಯರ್ಥಿಗಳು ಈ ಕುರಿತು ಮಾಹಿತಿ ತಿಳಿದಿರುವುದು ಅವಶ್ಯ.Karnataka government jobs; 5151 ಹುದ್ದೆಗಳು ಭರ್ತಿ, ವಿವರಗಳುವಸ್ತ್ರ ಸಂಹಿತೆ ಪುರುಷ/ ಮಹಿಳಾ ಅಭ್ಯರ್ಥಿಗಳು ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲ. ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು.ಕಂದಾಯ ಇಲಾಖೆ; 2 ಸಾವಿರ ನೇಮಕಾತಿ, ಯಾವ ಯಾವ ಹುದ್ದೆ? ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.ಮಹಿಳಾ ಅಭ್ಯರ್ಥಿಗಳು; ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು/ ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಧರಿಸುವುದು ಕಡ್ಡಾಯವಾಗಿದೆ.ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).ನಿಷೇಧಿತ ವಸ್ತುಗಳ ಪಟ್ಟಿ ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ, ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ.ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ/ HAT ಧರಿಸಿಬಾರದು. ಯಾವುದೇ ರೀತಿಯ ಮಾಸ್ಕ್‌ ಅನ್ನು ಧರಿಸುವಂತಿಲ್ಲ.ಅನುಮತಿಸಿರುವ ವಸ್ತುಗಳು; ಪರೀಕ್ಷೆಯ ದಿನದಂದು ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ. ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದುಕಡ್ಡಾಯಗೊಳಿಸಲಾಗಿದೆ.

ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.ಪರೀಕ್ಷೆಗೆ ಬರುವ ಅಭ್ಯರ್ಥಿಗಳು ಕೆಇಎ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

Megha News