Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ರೈತರಿಗೆ ಸೂಕ್ತ ಸಮಯದಲ್ಲಿ ಪರಿಹಾರದ ಹಣ ಸಿಗದಿದ್ದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಕಾರಣ

ರೈತರಿಗೆ ಸೂಕ್ತ ಸಮಯದಲ್ಲಿ ಪರಿಹಾರದ ಹಣ ಸಿಗದಿದ್ದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಕಾರಣ

ಬೆಂಗಳೂರು: ಬರ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಅದರೆ, ರೈತರಿಗೆ ಸೂಕ್ತ ಸಮಯದಲ್ಲಿ ಪರಿಹಾರದ ಹಣ ಸಿಗದಿದ್ದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಕಾರಣ ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದರು.

ವಿಡಿಯೋ ಕಾನ್ಪರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಎಚ್ಚರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವಂತೆ ಕಳೆದ ಎರಡು ತಿಂಗಳಿನಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರಂತರವಾಗಿ ಸೂಚಿಸಲಾಗುತ್ತಿದೆ.
ಆದರೂ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿ ಶೇ.70ನ್ನೂ ಮೀರಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಸಮಾಧಾನ ಹೊರಹಾಕಿದರು.
ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿನ ಸಾಧನೆ ತೀರಾ ಕಳಪೆಯಾಗಿದೆ. ಬರ ಪರಿಹಾರ ಹಣವನ್ನು ನೀಡಲು ರಾಜ್ಯ ಸರ್ಕಾರದ ಸಿದ್ದವಾಗಿದೆ. ಖಜಾನೆಯಲ್ಲಿ ಹಣವೂ ಇದೆ. ಆದರೆ, ಪರಿಹಾರ ಫ್ರೂಟ್ಸ್ ದತ್ತಾಂಶವನ್ನು ಆಧರಿಸಿರುವ ಕಾರಣ ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪೂ ಸಹ ರೈತರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇನ್ನಾದರೂ ಆಂದೋಲನ ಮಾದರಿಯಲ್ಲಿ ಕೆಲಸ ಮಾಡಬೇಕಾಗಿದೆ. ಶೀಘ್ರದಲ್ಲಿ ತಾಲೂಕು ಹೋಬಳಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳನ್ನು ಸ್ಥಳ ವೀಕ್ಷಣೆಗೆ ಕಳುಹಿಸಿ ಡಿಸೆಂಬರ್. 22ರ ಒಳಗಾಗಿ ರೈತರ ಜಮೀನಿನ ಸಂಪೂರ್ಣ ಮಾಹಿತಿಯನ್ನು ನಮೂದಿಸಿ ಎಂದು ಸಮಯದ ಗಡುವು ನೀಡಿದರು.
ಇದೇ ಸಮಯದಲ್ಲಿ ನೀರಿನ ಸಮಸ್ಯೆಯನ್ನು ಸೂಕ್ತ ಮಾದರಿಯಲ್ಲಿ ನಿಭಾಯಿಸಿದ್ದಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ಸಚಿವರು, “ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಜಿಲ್ಲೆಗಳಲ್ಲಿ ಅಧಿಕಾರಿಗಳು ಈಗಾಗಲೂ ಖಾಸಗಿ ಬೋರ್ ವೆಲ್ ಗಳನ್ನು ಗುರುತಿಸಿದ್ದಾರೆ. ಟ್ಯಾಂಕರ್ ಗಳಿಗೆ ಟೆಂಡರ್ ಅನ್ನೂ ಸಹ ಕರೆಯಲಾಗಿದೆ. ಇದು ನಿಜಕ್ಕೂ ಉತ್ತಮವಾದ ಕೆಲಸ.
ಮುಂದಿನ ಬೇಸಿಗೆಗೆ ನೀರಿನ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಅಧಿಕಾರಿಗಳ ಈ ಕ್ರಮ ಸಹಕಾರಿಯಾಗಲಿದೆ. ಆದರೆ, ಬರ ಘೋಷಿಸಲಾಗಿದ್ದರೂ ರಾಜ್ಯದ 134 ತಾಲೂಕುಗಳಲ್ಲಿ ಈವರೆಗೆ ಟಾಸ್ಕ್ ಪೋರ್ಸ್ ಸಭೆ ನಡೆಸಿಲ್ಲ. ಹೀಗಾಗಿ ಅಧಿಕಾರಿಗಳು ಈ ಬಗ್ಗೆಯೂ ಗಮನ ನೀಡಬೇಕು” ಎಂದರು.

Megha News