ರಾಯಚೂರು ಜಿಲ್ಲೆಯ ಜಲದುರ್ಗ ಐತಿಹಾಸಿಕ ಕೋಟೆಗೆ ಯಾವುದೇ ಅನುದಾನ ನಿಗದಿಪಡಿಸಿ ರುವುದಿಲ್ಲ. ಜಲದುರ್ಗ ಐತಿಹಾಸಿಕ ಕೋಟೆಯ ಜೀರ್ಣೋದ್ಧಾರಕ್ಕೆ ಪ್ರಸ್ತಾವನೆ ಸ್ವೀಕೃತಗೊಂಡಲ್ಲಿ ವಿಸ್ತೃತ ಯೋಜನಾ ವರದಿಯೊಂದಿಗೆ ಅನುದಾನ ಒದಗಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ ಹೇಳಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶರಣಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, 2013-14ನೇ ಸಾಲಿನ 13ನೇ ಹಣಕಾಸಿನ ಯೋಜನೆಯಡಿ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಐತಿಹಾಸಿಕ ಮುದಗಲ್ ಕೋಟೆಯ ಸಂರಕ್ಷಣಾ ಕಾಮಗಾರಿಯನ್ನು 50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗಿದೆ ಎಂದರು.
ಕೋಟೆಯ ಗೋಡೆಯ ಸಂರಕ್ಷಣಾ ಕಾಮಗಾರಿ ಹಾಗೂ ಕಾಂಕ್ರೀಟ್ ಚೈನ್ಲಿಂಕ್ ಫೆನ್ಸಿಂಗ್ ಕಾಮಗಾರಿಗಳ ಕೆಲಸ ಪೂರ್ಣಗೊಂಡಿದೆ. ಅದರಂತೆ ಜಲದುರ್ಗ ಐತಿಹಾಸಿಕ ಕೋಟೆಯ ಸಂರಕ್ಷಣೆ ಜೀರ್ಣೋದ್ಧಾರಕ್ಕೆ ಪ್ರಸ್ತಾವನೆ ಸ್ವೀಕೃತಗೊಂಡಲ್ಲಿ ನಿಯಮಾನುಸಾರ ಪರಿಶೀಲಿಸಲಾಗುವುದು ಎಂದು ತಿಳಿಸಿದರು.