ದೇವದುರ್ಗ. ಲೈಂಗಿಕ ಕಿರುಕುಳ ನೀಡಿದ ಆರೋ ಪ ಮತ್ತು ಎರಡನೇ ಮದುವೆಯಾದ ಆರೋಪ ಗಳು ಸಾಬೀತಾದ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಅಮಾನತು ಮಾಡಲಾಗಿದೆ.
ತಾಲೂಕಿನ ಮಸರಕಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಅಮಾನತು ಮಾಡಿದೆ. ಎರಡನೇ ಪತ್ನಿಯೊಂದಿಗೆ ಸಿದ್ದಪ್ಪ ಇರುವ ಫೋಟೋ ಸಾಮಾಜಿಕ ಜಾಲತಾಣಗ ಳಲ್ಲಿ ಹರಿದಾಡಿದೆ. ಪ್ರಭಾರ ಪ್ರಾಚಾರ್ಯ ಸಿದ್ದಪ್ಪ ವಿದ್ಯಾರ್ಥಿನಿಯರೊಂದಿಗೆ ಇರುವ ಫೋಟೋ, ವಿಡಿಯೋ, ಸಂಭಾಷಣೆ ಸಾಮಾಜಿಕ ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ಡಿಡಿಪಿಯು ಸೋಮಶೇಖರ ಹೊಕ್ರಾಣಿ ನೇತೃತ್ವದ ತ್ರಿಸದಸ್ಯ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಲಾಗಿತ್ತು.
ತನಿಖಾ ತಂಡ ಕಾಲೇಜಿಗೆ ಭೇಟಿ ನೀಡಿ ವಿಚಾರಣೆ ನಡೆಸಿದ ಬಳಿಕ ರಾಜ್ಯ ನಿರ್ದೇಶಕರಿಗೆ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ, ನಂತರ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರು ಲೈಂಗಿಕ ಕಿರುಕುಳ ನೀಡಿದ ಮತ್ತು ಎರಡನೇ ಮದುವೆಯಾದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದ್ದ ರಿಂದ ತನಿಖೆಯನ್ನು ಕಾಯ್ದಿರಿಸಿ ಅವರನ್ನು ಅಮಾನತು ಮಾಡಿದೆ.