ರಾಯಚೂರು. ಕ್ರೀಡೆಯಲ್ಲಿ ಸೋಲು ಗೆಲುವ ಎರಡೂ ಸರ್ವೆ ಸಾಮಾನ್ಯ ಸಮಾನವಾಗಿ ಸ್ವೀಕರಿಸಬೇಕು ಎಂದು ಹಿರಿಯ ಪತ್ರಕರ್ತ ಸುರೇಂದ್ರ ಚಾರ್ಯ ಕೊರ್ತಕುಂದ ಹೇಳಿದರು.
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾ ಚರಣೆ ನಿಮಿತ್ತವಾಗಿ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಯಚೂರು ರಿಪೋರ್ಟಸ್ ಗಿಲ್ಡ್ ವತಿಯಿಂದ ಹಮ್ಮಿಕೊಂಡ ಕ್ರಿಕೇಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು,
ಪತ್ರಕರ್ತರು ದಿನ ನಿತ್ಯದ ಕೆಲಸದ ಒತ್ತಡದ ಮಧ್ಯಯೂ ತಮ್ಮ ಆರೋಗ್ಯ ಮತ್ತು ಒತ್ತಡ ಕಳೆಯಲು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು, ಹಾಗೂ ಎಲ್ಲಾ ಕ್ಷೇತ್ರದಲ್ಲಿ ಪತ್ರಕರ್ತರು ಮಾಹಿತಿಯನ್ನು ಪಡೆದು ಪರಿಣಿತರಾಗುವುದರ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ನಿಯಮಗಳು ಹಾಗೂ ವರದಿಕಾರಿಕೆಯನ್ನು ಮಾಡಲು ಅನುಕೂಲವಾಗಿದೆ ಎಂದು ತಿಳಿಸಿದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಪತ್ರಕರ್ತರ ನಡುವೆ ಉತ್ತಮ ಬಾಂಧವ್ಯ ಬೆಳೆಯುತ್ತದೆ, ಕ್ರೀಡಾ ಸ್ಫೂರ್ತಿಯಿಂದ ಬಾಂಧವ್ಯ ಗಟ್ಟಿಗೊಳಿ ಸುವ ಕೆಲಸ ವಾಗುತ್ತದೆ, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪತ್ರಕರ್ತರ ಸ್ನೇಹವನ್ನು ಹೊಂದುವುದರ ಜೊತೆಗೆ ಕ್ರೀಡೆಯಲ್ಲಿಯೂ ತಮ್ಮ ಪ್ರತಿಭೆ ತೋರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಕಾರ್ಯನಿರತ ಪತ್ರ ಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶಿವ ಮೂರ್ತಿ ಹಿರೇಮಠ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್ ಗುರುನಾಥ,
ಹಿರಿಯ ಪತ್ರಕರ್ತ ವೆಂಕಟಸಿಂಗ, ರಾಯಚೂರು ರಿಪೋರ್ಟ್ಸ್ ಗಿಲ್ಡ್ ಅಧ್ಯಕ್ಷ ಚನ್ನಬಸವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪಾಷಾ, ರಾಯಚೂರು ರಿಪೋರ್ಟ್ಸ್ ಗಿಲ್ಡ್ ಪ್ರದಾನ ಕಾರ್ಯದರ್ಶಿ ವಿಜಯ ಕುಮಾರ ಜಾಗಟಗಲ್ ಸೇರಿದಂತೆ ಪತ್ರಕರ್ತರು ಭಾಗವಹಿಸಿದ್ದರು.