Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local News

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ಕಠಿಣ ಶಿಕ್ಷೆ ವಿಧಿಸಿ ಆದೇಶ

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣ ಕಠಿಣ ಶಿಕ್ಷೆ ವಿಧಿಸಿ ಆದೇಶ

ರಾಯಚೂರು. ಜಿಲ್ಲೆ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 2021 ರಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕೋ ನ್ಯಾಯಾಲಯ, ಪೀತಾಸೀನ ಲಿಂಗಸೂಗೂರಿನ ನ್ಯಾಯಾಲಯವು 20ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ಆದೇಶ ನೀಡಿರುತ್ತಾರೆ.

ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ ತಂದೆ ರಾಮಣ್ಣ ವಯಸ್ಸು-25 ಶಿಕ್ಷೆಗೆ ಗುರಿಯಾದ ಆರೋಪಿ.
ನೊಂದ ಅಪ್ರಾಪ್ತ ಬಾಧಿತಳು ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾದ ಮಹಾಂತೇಶ ಸಜ್ಜನ ಇವರು ಆರೋಪಿತನ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪತ್ರವನ್ನು ಸಲ್ಲಿಸಿದ್ದು ಇರುತ್ತದೆ. ಮಾನ್ಯ ನ್ಯಾಯಾಲಯವು ಒಟ್ಟು 20 ಸಾಕ್ಷಿಗಳ ಪೈಕಿ 17 ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಸಾಕ್ಷಿ ಪುರಾವೆಗಳನ್ನು ಪರೀಶಿಲಿಸಿ ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿದೆ ಎಂದು 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ಪೋಕೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಯವರು ಆರೋಪಿತನ ವಿರುದ್ಧ ಅಪಾದನೆ ಸಾಬೀತಾಗಿದೆ ಎಂದು ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ. ಅದರಂತೆ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ. 15,000 ದಂಡವನ್ನು ವಿಧಿಸಲಾಗಿದೆ ಮತ್ತು ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ರೂ.9.00.000 (ರೂ. ಒಂಬತ್ತು ಲಕ್ಷಗಳ) ಪರಿಹಾರವನ್ನು ನೀಡಬೇಕೆಂದು ಮಾನ್ಯ ನ್ಯಾಯಾಲಯವು ಆದೇಶಿಸಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ. ಮಂಜುನಾಥ ರವರು ವಾದವನ್ನು ಸಮರ್ಥವಾಗಿ ಮಂಡಿಸಿರುತ್ತಾರೆ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಆಗಿನ ಪೇದೆಗಳಾದ ಬಸವರಾಜ, ಮಲ್ಲಪ್ಪ ಪೂಜಾರಿ ಮತ್ತು ವಿರೇಶ ರವರು ಕರೆತಂದು ಸಹಕರಿಸಿರುತ್ತಾರೆ.

Megha News