Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಜ.16ಕ್ಕೆ ಹೊಸ ರಂಗು ರೂಪದಲ್ಲಿ ನವೀಕರಣಗೊಂಡ ರಂಗಮಂದರ ಉದ್ಘಾಟನೆ

ಜ.16ಕ್ಕೆ ಹೊಸ ರಂಗು ರೂಪದಲ್ಲಿ ನವೀಕರಣಗೊಂಡ ರಂಗಮಂದರ ಉದ್ಘಾಟನೆ

ರಾಯಚೂರು:- ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರ ನವೀಕರಣಗೊಂಡಿದ್ದು, ಜ.16ರಂದು ಉದ್ಘಾಟನೆ ಆಗಲಿದೆ ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಿದ್ದ ರಂಗಮಂದಿರ ನವೀಕರಣಗೊಂಡು ಹೊಸ ರಂಗು ಪಡೆದುಕೊಂಡು ಉದ್ಘಾಟನೆಗೆ ಸಿದ್ದವಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರದಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನವೀಕರಣಗೊಂಡ ಪಮಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರವು ಜ.16ರಂದು ಬೆಳಿಗ್ಗೆ 10:30ಕ್ಕೆ ಉದ್ಘಾಟನೆಗೊಳ್ಳಲಿದೆ.
ಈ ಹಿಂದೆ ರಂಗಮಂದಿರದ ನವೀಕರಣ ಕಾರ್ಯ ಆರಂಭವಾಗಿತ್ತು. ಇದೀಗ ಆಧುನಿಕ ತಾಂತ್ರಿಕ ಸೌಲಭ್ಯಗಳಿಂದ ಸುಸಜ್ಜಿತ ವ್ಯವಸ್ಥೆಗಳ ಮೂಲಕ ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಗು ಅನೇಕ ಕಾರ್ಯಕ್ರಮಗಳನ್ನು ಉಣಬಡಿಸುವುದಕ್ಕೆ ಸಿದ್ದವಾಗಿದೆ.
ನವೀಕರಣಗೊಂಡ ವೇದಿಕೆ, ಧ್ವನಿ, ಬೆಳಕು, ಆಸನಗಳ ವ್ಯವಸ್ಥೆ ಜೊತೆಗೆ ಇಡೀ ರಂಗಮಂದಿರದ ಪ್ರೇಕ್ಷಾಗೃಹವು ಹವಾನಿಯಂತ್ರಿತಗೊಂಡಿದ್ದು, ಸಾರ್ವಜನಿಕರು ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬಹುದಾಗಿದೆ.
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರು ಘನ ಉಪಸ್ಥಿತಿ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕರಾದ ಹಂಪನಗೌಡ ಬಾದರ್ಲಿ, ಶಶೀಲ್.ಜಿ ನಮೋಶಿ, ಜಿ.ಹಂಪಯ್ಯ ನಾಯಕ, ಮಾನಪ್ಪ ವಜ್ಜಲ್, ಬಸನಗೌಡ ದದ್ದಲ್, ಆರ್.ಬಸನಗವಡ ತುರ್ವಿಹಾಳ, ಡಾ.ಚಂದ್ರಶೇಖರ ಪಾಟೀಲ್, ಕರೆಮ್ಮ ಜಿ.ನಾಯಕ, ಶರನೇಗೌಡ ಬಯ್ಯಾಪೂರ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಜೆ. ರವಿಶಂಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಡಾ.ಎನ್.ಮಂಜುಳಾ, ಕೆಕೆಆರ್‌ಡಿಬಿ ಕಾರ್ಯದರ್ಶಿ ಎಂ.ಸುದರೇಶ್ ಬಾಬು, ಜಿಲ್ಲಾಧಿಖಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

Megha News