ರಾಯಚೂರು: ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜು.27ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಆದೇಶ ಹೊರಡಿಸಿದ್ದಾರೆ.
ಜು.27ರಂದು ನಿರಂತರ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳ ಹಿತ ದೃಷ್ಠಿಯಿಂದ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದ್ದಾರೆ.
ಜು.26ರಂದು ಈ ಬಗ್ಗೆ ಶಾಲಾ ಶಿಕ್ಷ ಇಲಾಖೆಯಿಂದ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದ್ದು, ಪತ್ರದಲ್ಲಿ 27ರಂದು ಶಾಲೆಗಳಿಗೆ ಮಳೆಯ ಹಿನ್ನಲೆಯಲ್ಲಿ ರಜೆ ಘೋಷಿಸಲು ಕೋರಲಾಗಿತ್ತು.