ರಾಯಚೂರು,ಮೇ.೧- ನಗರದರೈಲ್ವೆ ಸ್ಟೇಷನ್ ಪೋಸ್ಟ್ ಆಫೀಸ್ ಹತ್ತಿರ ಯುವಕನೋರ್ವ ಕೊಲೆಯಾಗಿರುವ ಘಟನೆ ವರದಿಯಾಗಿದೆ.
ಕೊಲೆಯದ ಯುವಕನನ್ನು ಇಂದಿರಾನಗರದ ವಿರೇಶ(೩೫) ಎಂದು ಗುರುತಿಸಲಾಗಿದೆ. ಘಟನೆಗೆ ಖಚಿತ ಕಾರಣ ತಿಳಿದು ಬಂದಿಲ್ಲ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದೆ. ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.