ರಾಯಚೂರು. ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ದ್ವಿಚಕ್ರ ವಾಹನ ಸವಾರರು ನ.1 ರಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ವೆಂಕಟೇಶ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ದ್ವಿಚಕ್ರ ವಾಹನ ಸವಾರರು ಸಾವನಪ್ಪುತ್ತಿದ್ದಾರೆ, ಪ್ರಸಕ್ತ ವರ್ಷದಲ್ಲಿ 240 ಜನ ದ್ವಿಚಕ್ರ ವಾಹನಗಳ ಸವಾರರು ಸಾವನಪ್ಪುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಆದೇಶ ಮೇರೆಗೆ ಸಾರ್ವಜನಿಕರಿಗೆ ಮೈಕ್ ಮೂಲಕ ಮಾಹಿತಿ ನೀಡುತ್ತಿದ್ದಾರೆ.
ರಸ್ತೆ ಅಪಘಾತಗಳಲ್ಲಿ ಸಾವುಗಳನ್ನು ತಪ್ಪಿಸಲು ಪ್ರತಿಯೊಬ್ಬ ಸವಾರರು ಕಡ್ಡಾಯವಾಗಿ ನ.1 ರಿಂದ ಹೆಲ್ಮೆಟ್ ಗಳನ್ನು ಧರಿಸಬೇಕು ಒಂದು ವೇಳೆ ಹೆಲ್ಮೆಟ್ ಇಲ್ಲದೆ ಸಂಚರಿಸಿದರೆ ದಂಢ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.