ರಾಯಚೂರು. ಕಳೆದ ಎರಡು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಅತಿಯಾಗಿ ತಲೆದೋರಿದ್ದು, ನೀರು ಒದಗಿಸಲು ನಿರ್ಲಕ್ಷ್ಯ ಧೋರಣೆ ಅನುಸರಿಸಿದ ಜಂಬಲದಿನ್ನಿ ಗ್ರಾಮ ಪಂಚಾಯತಿಗೆ ಬೀಗ ಹಾಕಿದ ಘಟನೆ ನಡೆದಿದೆ.
ತಾಲೂಕಿನ ಜಂಬಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೊತ್ತದೊಳ್ಳಿ ಮತ್ತು ಜಂಬಲದಿನ್ನಿ ಗ್ರಾಮಗಳಲ್ಲಿ ಕಳೆದ ಎರಡು ತಿಂಗಳಿಂದ ಕುಡಿ ಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.
ಗ್ರಾಮದ ಜನರು ಮತ್ತು ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಲವು ಬಾರಿ ಪಂಚಾಯಿತಿ ಅಧಿಕಾರಿಗಳಿಗೆ ಗ್ರಾಮಸ್ಥರು ನೀರಿನ ಸಮಸ್ಯೆ ಅಭಾವವನ್ನು ಪರಿಹರಿಸಲು ಮನವಿ ಮಾಡಿದ್ದರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯತನ ವಹಿಸಿರುವುದರಿಂದ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಪೋನ್ ಮಾಡಿದರೂ ಕರೆ ಸ್ವೀಕರಿಸದೇ ಬೇಜಬ್ದಾರಿತನ ವರ್ತಿಸು ತ್ತಿದ್ದಾರೆ.
ಬೇಸಿಗೆ ಹೆಚ್ಚಿರುವ ಹಿನ್ನೆಲೆಯಲ್ಲಿ ನೀರಿನ ಅವಶ್ಯಕತೆ ಹೆಚ್ಚಿದೆ, ಗ್ರಾಪಂ ನಿರ್ಲಕ್ಷ್ಯ ವಹಿಸಿದ್ದರಿಂದ ಕರ್ನಾಟಕ ಪ್ರಾಂತ ರೈತ ಸಂಘ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಗೆ ಎರಡು ಗಂಟೆಗೂ ಅಧಿಕ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.