Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಜಾತಿ ಜನಗಣತಿ ವರದಿ ಮೂಲಪ್ರತಿಯೇ ನಾಪತ್ತೆ: ರಾಜ್ಯ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ಪತ್ರ.

ಜಾತಿ ಜನಗಣತಿ ವರದಿ ಮೂಲಪ್ರತಿಯೇ ನಾಪತ್ತೆ: ರಾಜ್ಯ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ಪತ್ರ.

ಬೆಂಗಳೂರು. ಜಾತಿ ಜನಗಣತಿ ವರದಿ ಅನುಷ್ಠಾನ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು ಇದೀಗ ಮತ್ತೊಂದು ವಿವಾದ ಉಂಟಾಗಿದೆ, ಜಾತಿ ಜನಗಣತಿ ವರದಿ ಮೂಲ ಪ್ರತಿಯೇ ನಾಪತ್ತೆಯಾಗಿದೆ ಎನ್ನಲಾಗಿದ್ದು ಈ ಕುರಿತು ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಪತ್ರ ಬರೆದಿದ್ದಾರೆ.

ಜಾತಿ ಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಕಾಣೆಯಾಗಿದೆ. ಸೀಲ್ಡ್ ಬಾಕ್ಸ್​​ನಲ್ಲಿದ್ದ ಮೂಲ ಪ್ರತಿ ಅಥವಾ ಹಸ್ತಪ್ರತಿ ಲಭ್ಯವಿಲ್ಲವೆಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಈಗ ಬೆಳಕಿಗೆ ಬಂದಿದೆ.
‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 (ಜಾತಿ ಗಣತಿ ವರದಿ)ಯನ್ನು 2021ರ ಅಗಸ್ಟ್​ 26 ರಂದು ಹಿಂದುಳಿದ ವರ್ಗಗಳ ಆಯೋಗ ಕಚೇರಿಯಲ್ಲಿ ಇರಿಸಲಾಗಿತ್ತು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳು ಹಾಗೂ ಇತರ ವಿವರಗಳನ್ನೊಳಗೊಂಡ ಸೀಲ್ಡ್ ಬಾಕ್ಸ್‌ಗಳನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಸದಸ್ಯ ಕಾರ್ಯದರ್ಶಿಯವರ ಸಮ್ಮುಖದಲ್ಲಿ ಮಹಜರ್ ನಡೆಸಿ 2021ರ ಅಕ್ಟೋಬರ್​​ 5 ರಂದು ತೆರೆಯಲಾಗಿತ್ತು. ಆದರೆ ಮುದ್ರಿತ ಮುಖ್ಯವರದಿಯಲ್ಲಿ ಸದಸ್ಯ ಕಾರ್ಯದರ್ಶಿಯವರ ಸಹಿ ಇರುವುದಿಲ್ಲ.
ಇದರೊಂದಿಗೆ ಇದಕ್ಕೆ ಸಂಬಂಧಿಸಿದ ಮುಖ್ಯ ವರದಿಯ ಮೂಲ ಅಥವಾ ಹಸ್ತಪ್ರತಿ ಸೀಲ್ಡ್ ಬಾಕ್ಸಿನಲ್ಲಿ ಲಭ್ಯವಿಲ್ಲ. ಹೀಗಾಗಿ ಹಸ್ತಪ್ರತಿಯನ್ನು ಕೂಡಲೇ ಆಯೋಗದ ಕಛೇರಿಗೆ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಲಾಗಿತ್ತು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬಯಸುತ್ತಾ, ಮುಂದೆ ಈ ವಿಷಯಕ್ಕೆ ಸಂಬಂಧಪಟ್ಟಂತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟಪಡಿಸುವಂತೆ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

Megha News