Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ಕರಿಮಣಿ ಮಾಲೀಕ ನೀನಲ್ಲ ರೀಲ್ಸ್‌ಗೆ ನೊಂದ ಪತಿ ಆತ್ಮಹತ್ಯೆ

ಕರಿಮಣಿ ಮಾಲೀಕ ನೀನಲ್ಲ ರೀಲ್ಸ್‌ಗೆ ನೊಂದ ಪತಿ ಆತ್ಮಹತ್ಯೆ

ಚಾಮರಾಜನಗರ: ಪತ್ನಿ ಮಾಡಿದ ಕರಿಮಣಿ ಮಾಲೀಕ ನೀನಲ್ಲ ರೀಲ್ಸ್ ಗೆ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಬೆಳ್ಳಿಗ್ಗೆ 11ಗಂಟೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

.ಜಿ.ಪಾಳ್ಯ ಗ್ರಾಮದ ಕುಮಾರ್ (33) ಮೃತ ದುರ್ದೈವಿ. ಈತ ರೂಪಾ ಎಂಬಾಕೆಯನ್ನು ಮದುವೆಯಾಗಿದ್ದನು. ರೂಪಾ ತನ್ನ ಸೋದರ ಮಾವ ಗೋವಿಂದನೊಂದಿಗೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಳು. ಇದು ವೈರಲ್ ಆಗುತ್ತಿದ್ದಂತೆಯೇ ಪತಿ ಕುಮಾರನ ಸ್ನೇಹಿತರು, ಜನರು ಕೂಡ ಕೆಟ್ಟದಾಗಿ ಮಾತನಾಡಲಾರಂಭಿಸಿದ್ದರು. ಇದರಿಂದ ನೊಂದ ಕುಮಾರ್ ಪತ್ನಿ ರೂಪಳೊಂದಿಗೆ ಜಗಳ ತೆಗೆದಿದ್ದನು. ಈ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ಜಟಾಪಟಿ ನಡೆದಿತ್ತು. ಆ ನಂತರ ನೊಂದ ಕುಮಾರ್ ಬುಧವಾರ ಜಮೀನಿಗೆ ಹೋದವನು ಅಲ್ಲಿದ್ದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.

ಮನೆಯಿಂದ ಹೊರಗೆ ಹೋದವನು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬದವರು ಹುಡುಕಾಟ ನಡೆಸಿದಾಗ ಗುರುವಾರ ಬೆಳಿಗ್ಗೆ ಜಮೀನಿನ ಮರವೊಂದಕ್ಕೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿ ಮಹಜರು ನಡೆಸಿ ಶವವನ್ನು ಹನೂರು ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಮೃತ ಕುಮಾರ್ ನ ಸೋದರ ಮಹದೇವಸ್ವಾಮಿ ನೀಡಿದ ದೂರಿನ ಮೇರೆಗೆ ರೀಲ್ಸ್ ಮಾಡಿದ ರೂಪಾ ಮತ್ತು ಆಕೆಯ ಸೋದರ ಮಾವ ಗೋವಿಂದ ವಿರುದ್ಧ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

Megha News