Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಅ.5 ಕ್ಕೆ ಕರ್ನಾಟಕ 50ರ ಸಂಭ್ರಮ, ಕಾರ್ಯಕ್ರಮ ಆಯೋಜನೆ ಎಲ್ಲರ ಸಹಕಾರದ ಮೂಲಕ ಯಶಸ್ವಿಗೊಳ್ಳಿಸಿ: ಡಾ.ಪುರುಷೋತ್ತಮ

ಅ.5 ಕ್ಕೆ ಕರ್ನಾಟಕ 50ರ ಸಂಭ್ರಮ, ಕಾರ್ಯಕ್ರಮ ಆಯೋಜನೆ ಎಲ್ಲರ ಸಹಕಾರದ ಮೂಲಕ ಯಶಸ್ವಿಗೊಳ್ಳಿಸಿ: ಡಾ.ಪುರುಷೋತ್ತಮ

ರಾಯಚೂರು. ಕರ್ನಾಟಕ ಸರ್ಕಾರವು ಆಚರಿಸುತ್ತಿರುವ ಕನ್ನಡ 50ರ ಕಾರ್ಯಕ್ರಮದ ಭಾಗವಾಗಿ ಕರ್ನಾಟಕ ಸರ್ಕಾರವು ಮುಖ್ಯವಾದ ನಾಲ್ಕು ಕಾರ್ಯಕ್ರಮಗಳನ್ನು ರಾಜ್ಯದ ಬೇರೆ ಬೇರೆ ಕಡೆ ಆಯೋಜಿಸಲಾಗುತ್ತಿದ್ದು, ಎಲ್ಲರ ಸಹಕಾರ ನೀಡುವ ಮೂಲಕ ಕಾರ್ಯಕ್ರಮಗಳನ್ನು ಯಶಸ್ವಿಗೊಳ್ಳಿಸಬೇಕೆಂದು ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ ಮತ್ತು ಮುನ್ನೋಟ ಕುರಿತು ರಾಜ್ಯ ಮಟ್ಟದ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಆಗಸ್ಟ್ 28ರಂದು ಗಡಿನಾಡು ಪ್ರದೇಶವಾದ ಗುಡ್ಡಾಪುರದಲ್ಲಿ ಮೊದಲನೇ ಕಾರ್ಯಕ್ರಮ ನಡೆಯಲಿದೆ. ಎರಡನೇ ಕಾರ್ಯಕ್ರಮವು ಸೆಪ್ಟಂಬರ್ 24 ಮತ್ತು 25ರಂದು ಮಂಗಳೂರಿನಲ್ಲಿ ನಡೆಯಲಿದೆ. ಮೂರನೇ ಕಾರ್ಯಕ್ರಮವು ಅಕ್ಟೋಬರ್ 5ರಂದು ರಾಯಚೂರಿನಲ್ಲಿ ನಡೆಯಲಿದ್ದು, ಕೊನೆಯ ಕಾರ್ಯಕ್ರಮವು ನವೆಂಬರ್ 1ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದರು.
ಅಕ್ಟೋಬರ್ 5ರಂದು ರಾಯಚೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವು 1980ರ ದಶಕದಲ್ಲಿ ನಡೆದ ಗೋಕಾಕ ಚಳುವಳಿಯನ್ನು ಕೇಂದ್ರದಲ್ಲಿರಿಸಿಕೊಂಡು ಚಳುವಳಿಯ ಹಿನ್ನೋಟ ಮತ್ತು ಮುನ್ನೋಟದ ಬಗೆಗೆ ಚರ್ಚಿಸುವ ಉದ್ದೇಶವನ್ನು ಹೊಂದಿದೆ. ಈ ಚಳಿವಳಿಯಲ್ಲಿ ಭಾಗವಹಿಸಿದ ಅನೇಕ ಹಿರಿಯ ಹೋರಾಟಗಾರರು, ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮತ್ತು ಕನ್ನಡ ಚಳುವಳಿಯು ಮುಂದೆ ಸಾಗಬೇಕಾದ ಹಾದಿಗಳ ಬಗ್ಗೆ ಅನೇಕ ವಿಧ್ವಾಂಸರು ಬೆಳಕು ಚೆಲ್ಲಲಿದ್ದಾರೆ. ಗೋಕಾಕ ಚಳುವಳಿಯನ್ನು ಮುನ್ನಡೆಸಿದ ಹಿರಿಯ ಹೋರಾಟಗಾರರನ್ನು ಈ ಸಂದಂರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದ ಭಾಗವಾಗಿ ಕಲಾತಂಡಗಳಿಂದ ಮೆರವಣಿಗೆ, ಕಲ್ಯಾಣ ಕರ್ನಾಟಕದ ಕಲಾ ತಂಡಗಳಿಂದ ಕಲಾ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಚಳುವಳಿಯ ಭಾವಚಿತ್ರಗಳು ಮತ್ತು ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಗುವುದು ಎಂದರು.
ಅಕ್ಟೋಬರ್ 5ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆ. ಅದರ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ ಮತ್ತು ಸ್ಥಳೀಯ ಶಾಸಕರು ಮತ್ತು ಸಂಸದರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ಎಲ್ಲರು ಸಹಕರಿಸಬೇಕೆಂದರು. ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧ್ಯಕ್ಷರ ದೂರವಾಣಿ ಸಂಖ್ಯೆ; 7303523378ಗೆ ಸಂಪರ್ಕಿಸಬಹುದಾಗಿದೆ.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಸಂತೋಷ್ ಹಾನಗಲ್, ಅಪರ ಜಿಲ್ಲಾಧಿಕಾರಿಗಳಾದ ಶಿವಪ್ಪ ಯಲ್ಲಪ್ಪ ಭಜಂತ್ರಿ, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹಿಬೂಬ್ ಜಿಲಾನಿ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಜಗದೀಶ್ ಗಂಗಣ್ಣನವರು, ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯಸ್ವಾಮಿ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಶ್ರೀದೇವಿ, ಕಾರ್ಮಿಕ ಇಲಾಖೆ ಅಧಿಕಾರಿ ಅರತಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

Megha News