Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಪಟಾಕಿ ಮಾರಾಟಕ್ಕೆ ಮಕ್ಕಳನ್ನು ಬಳಸಿಕೊಂಡಲ್ಲಿ ಮಾಲೀಕರ ವಿರುದ್ಧ ಕಾನೂನು ಕ್ರಮ

ಪಟಾಕಿ ಮಾರಾಟಕ್ಕೆ ಮಕ್ಕಳನ್ನು ಬಳಸಿಕೊಂಡಲ್ಲಿ ಮಾಲೀಕರ ವಿರುದ್ಧ ಕಾನೂನು ಕ್ರಮ

ರಾಯಚೂರು. ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿ ಕೊಳ್ಳುವಂತಿಲ್ಲ ಒಂದು ವೇಳೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ( ನಿಷೇಧ ಹಾಗೂ ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ 2016ರ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ, 14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ,
ರಾಯಚೂರು ಜಿಲ್ಲೆ ಮತ್ತು ತಾಲೂಕುಗಳಲ್ಲಿ ದಿಪಾವಳಿ ಪ್ರಯುಕ್ತ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಪಟಾಕಿ ತಯಾರಿಕೆ, ಮಾರಾಟ ಹಾಗೂ ಯಾವುದೇ ಕಾರಣಕ್ಕೂ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು ತಪ್ಪಿದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ( ನಿಷೇಧ ಹಾಗೂ ನಿಯಂತ್ರಣ ಕಾಯ್ದೆ) ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

Megha News