ರಾಯಚೂರು: ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕಳೆದ 3 ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಾರದೊಳಗೆ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ನಿರ್ಧಾರ ತಿಳಿಸುವುದಾಗಿ ಹೇಳಿದ್ದು, ಇದೀಗ ಕಾಲಾವಕಾಶ ಮೀರಿದೆ, ಸಂಕ್ರಾಂತಿಯೊಳಗೆ ಒಂದು ನಿರ್ಧಾರ ಕೈಗೊಳ್ಳಬೇಕು, ಅಲ್ಲಿಯವರೆಗೆ ಹೋರಾಟ ನಿರಂತರವಾಗಿ ನಡೆಯುತ್ತಲೇ ಇರುತ್ತದೆ ಎಂದು
ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಲಿಂಗಾಯತ ಸಮಾಜದ ಜನರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ, ಆದ್ದರಿಂದ ಮೀಸಲಾತಿ ಬೇಕಾಗಿದೆ, ಈ ನಿಟ್ಟಿನಲ್ಲಿ ಕಳೆದ 3 ವರ್ಷಗಳಿಂದ ವಿವಿಧ ಹಂತದ ಹೋರಾಟ ಮಾಡಲಾಗಿದೆ, ಬೆಳಗಾವಿ ಅಧಿವೇಶನದ ಮುತ್ತಿಗೆ ನಿರ್ಧರಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾರದೊಳಗೆ ಈ ಕುರಿತು ಕಾನೂನು ತಜ್ಞರ ಜೊತೆ ಸಭೆ ನಡೆಸುವುದಾಗಿ ತಿಳಿಸಿದ್ದು, ವಾರ ಕಳೆದಿದೆ, ಆದರೂ ಈ ಬಗ್ಗೆ ಚಕಾರವಿಲ್ಲ,
ಸರ್ಕಾರ ಈ ಬಗ್ಗೆ ಸಕರಾತ್ಮಕ ನಿರ್ಧಾರ ಕೈಗೊಳ್ಳುವವರೆಗೂ ಹೋರಾಟ ನಿರಂತರವಾ ಗಿರುತ್ತದೆ ಎಂದರು.
ಮೀಸಲಾತಿಗಾಗಿ ರಾಜ್ಯ ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ನಡೆಸುತ್ತಿದ್ದು, ಹಲವು ಜಿಲ್ಲೆಯಲ್ಲಿ ಮಾಡಲಾಗಿದೆ, ಇದೀಗ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಹತ್ತಿರ ನಾಳೆ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನಾ ಸಮಾವೇಶ ನಡೆಸಲಾಗುತ್ತದೆ, ರಸ್ತೆಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.