Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Local News

ಸಂವಿಧಾನದ ಉದಾತ್ತ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ – ಸಂಜಯ್ ಪವಾರ್

ಸಂವಿಧಾನದ ಉದಾತ್ತ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ – ಸಂಜಯ್ ಪವಾರ್

ರಾಯಚೂರು : ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಸೋಮ ಸುಭದ್ರಮ್ಮ ರಾಮನಗೌಡ ಮಹಿಳಾ ಮಹಾವಿದ್ಯಾಲಯ ದಲ್ಲಿಂದು 75 ನೇ ಸಂವಿಧಾನ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ , ವಿದ್ಯಾರ್ಥಿನಿಯರಿಗೆ ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸುವ ಮೂಲಕ ಕಾರ್ಯಕ್ರಮವನ್ನು ಪ್ರಾಚಾರ್ಯರಾದ ಸಂಜಯ್ ಪವಾರ್ ರವರು ಉದ್ಘಾಟಿಸಿ ಮಾತ‌ನಾಡಿದವರು . ನಮ್ಮ ಸಂವಿಧಾನವು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಸಂವಿಧಾನವಾಗಿದ್ದು ಇದರ ಆಶಯವನ್ನು ತಿಳಿದು ಮೂಲಭೂತ ಹಕ್ಕು ಪಡೆದು ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು ಅಲ್ಲದೇ ಸಂವಿಧಾನ ಉದಾತ್ತ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ವೇಳೆ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ತ್ರಿವೇಣಿರವರು ಮಾತನಾಡಿ ಜಗತ್ತಿನಲ್ಲಿ ಹಲವು ವೈವಿಧ್ಯತೆಯನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನ ಎಲ್ಲ ವರ್ಗದ ಜನರಿಗೆ ಸಮಾನತೆಯನ್ನು ಒದಗಿಸುವ ಜತೆಗೆ ತಾರತಮ್ಯ ತೊಡೆದುಹಾಕಲು ನೂರಾರು ಕಾನೂನುಗಳನ್ನು ರೂಪಿಸಿದ ಬೃಹತ್ ಮಾದರಿ ಸಂವಿಧಾನವಾಗಿ ನಿಂತಿದೆ ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಗಳಾದ ಸಣ್ಣವೀರಣ್ಣಗೌಡ , ಎನ್.ಎಸ್.ಎಸ್ ಅಧಿಕಾರಿಗಳಾದ ಡಾ.ಹನುಮಂತ ನಾಯ್ಕ್ , ಐ.ಕ್ಯೂ.ಎ.ಸಿ ಸಂಯೋಜಕರಾದ ಗೌರೀ ಕಾಶೀನಾಥ್, ಅರ್ಥಶಾಸ್ತ್ರ ಮುಖ್ಯಸ್ಥರಾದ ಡಾ.ವೆಂಕಟಪ್ಪ ನಾಯಕ್ ಸೇರಿದಂತೆ ಕಾಲೇಜಿನ ಉಪನ್ಯಾಸಕರುಗಳು, ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha News