ರಾಯಚೂರು: ರಾಜ್ಯದಲ್ಲಿ ಶೀಘ್ರವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನ ಕೈಗೊಳ್ಳಲಾಗುವುದು ಈ ಬಗ್ಗೆ ಸಿಎಂ ಅವರು ಸ್ಪಷ್ಟನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗಿದೆ. ಕಾರ್ಯಕರ್ತರ ಮಹದಾಸೆಯಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾರ್ಚ್ ಬಜೆಟ್ ನಂತರದಲ್ಲಿ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆಸಲಾಗುವುದು ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.
ತಾಂತ್ರಿಕ ಕಾರಣಕ್ಕಾಗಿ ಕೋರ್ಟ್‌ನಲ್ಲಿದೆ. ಕಾರ್ಯಕರ್ತರ ಚುನಾವಣೆಗೆ ಸಜ್ಜಾಗುವ ಅವಶ್ಯಕತೆಯಿದ್ದು, ಅಧಿಕಾರ ಸಾಮಾನ್ಯ ಜನರಿಗೂ ಸಿಗುವಂತೆ ಕಾಂಗ್ರೆಸ್ ಸರ್ಕಾರದ ಸಿದ್ದಾಂತವಿದೆ. ಅದರಂತೆ ಶೀಘ್ರದಲ್ಲಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲಾಗುವುದು ಎಂದರು.