ರಾಯಚೂರು: ರಾಯಚೂರಿನಲ್ಲಿ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಜೆಸ್ಕಾಂ ಕಚೇರಿ ಹಾಗೂ ಜೆಸ್ಕಾಂ ಇಂಜಿನೀಯರ್ ಮನೆ ಮೇಲೆ ಇಂದು ಬೆಳ್ಳಂ ಬೆಳಿಗ್ಗೆ ದಾಳಿ ನಡೆದಿದೆ.
ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ಸಮಯದಲ್ಲಿ ನಗರದ ಐಡಿಎಸ್ಎಂಟಿ ಲೇಔಟ್ಲ್ಲಿರುವ ಜೆಸ್ಕಾಂ ಕಿರಿಯ ಇಂಜಿನೀಯರ್ ಹುಲಿರಾಜ್ ಮನೆಯ ಮೇಲೂ ದಾಳಿ ನಡೆದಿದೆ.
ಗಿಲ್ಲೆಸೂಗೂರು ಕಿರಿಯ ಅಭಿಯಂತರ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಲಿರಾಜ್, ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೊಪ್ಪಳ ಹಾಗೂ ರಾಯಚೂರಿನ ತಂಡದಿಂದ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು.ಸಿ, ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ಪೆಕ್ಟರ್ ಶೈಲಜ ಸೇರಿದಂತೆ ಇತರೆ 10 ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಮಹತ್ವದ ದಾಖಲೆಗಳು, ನಗದು, ಚಿನ್ನ ಪರಿಶೀಲನೆ ನಡೆಸುತ್ತಿದ್ದಾರೆ.