ಬೆಂಗಳೂರು: ಅಕ್ರಮ ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ದಂಡದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ. ಬೆಸ್ಕಾಂ ಲೆಕ್ಕಾಚಾರ ಪ್ರಕಾರ 2.5 ಕಿ.ವ್ಯಾ ಬಳಕೆ ಆಗಿದೆ ಅಂತ ಇದೆ. ಬೆಸ್ಕಾಂ ಇಲಾಖೆ 2,526 ರೂಪಾಯಿ ಫೈನ್ ಹಾಕಬೇಕಿತ್ತು. ಆದರೆ 68,526 ರೂಪಾಯಿ ದಂಡ ವಿಧಿಸಿದ್ದಾರೆ. ನಮ್ಮ ಮನೆಗೆ 33 ಕಿಲೋ ವ್ಯಾಟ್ ವಿದ್ಯುತ್ ಬಳಕೆಗೆ ಅನುಮತಿ ಇದೆ ನಾನು ನಿತ್ಯ ಉಪಯೋಗ ಮಾಡುವ ಕರೆಂಟ್ ಇದು ಎಂದು ಕಿಡಿಕಾರಿದರು.
ಕರೆಂಟ್ ಬಿಲ್ ಬಗ್ಗೆ ಪುನರ್ ಪರಿಶೀಲನೆ ಮಾಡಲು ಹೇಳಿದ್ದೇನೆ. ನೀವು ನೀಡಿದ ಬಿಲ್ ಕೂಡ ಸರಿ ಇಲ್ಲ ಎಂದು ಪ್ರತಿಭಟನೆ ಮಾಡಿದ್ದೇನೆ ಎಂದು ಬೆಸ್ಕಾಂ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.
ಕರೆಂಟ್ ಕಳ್ಳ ಎಂದು ನನಗೆ ಲೇಬಲ್ ಬೇರೆ ಕೊಟ್ಟಿದ್ದಾರೆ. ಸಿಎಂ ಡಿಸಿಎಂ ಸೇರಿ ಪಟಾಲಾಂ ಎಲ್ಲರೂ ಹೀಗೆ ಹೇಳುತ್ತಿದ್ದಾರೆ. ಬೆಸ್ಕಾಂ ಬಿಲ್ನಲ್ಲಿ ಅವರ ಲೆಕ್ಕಾಚಾರದಲ್ಲಿ 2.5 ಕಿಲೋ ವ್ಯಾಟ್ ಉಪಯೋಗ ಅಂತ ಇದೆ. 2526 ರೂಪಾಯಿ ಹಾಕಿದ್ದಾರೆ. ನಮ್ಮ ಮನೆಗೆ 33 ಕಿಲೋ ವ್ಯಾಟ್ ಪರ್ಮಿಷನ್ ತಗೊಂಡಿದ್ದೇನೆ. ನಾನು ನಿತ್ಯ ಉಪಯೋಗ ಮಾಡುವ ಕರೆಂಟ್ ಇದು. ಹೀಗಾಗಿ ಮಹಜರ್ ಕಾಪಿ ಕೇಳಿದ್ದೇನೆ ಎಂದರು.
ಹಿಂದೆ ಲುಲು ಮಾಲ್ ಕಾಮಗಾರಿ ವೇಳೆ ಕರೆಂಟ್ ಬಿಲ್ ನೀಡಿಲ್ಲ. ಲುಲು ಮಾಲ್ ಆರಂಭಕ್ಕೂ ಮುನ್ನ 6 ತಿಂಗಳು ಕರೆಂಟ್ ಬಿಲ್ ನೀಡಿಲ್ಲ. ಲುಲು ಮಾಲ್ ಬಳಕೆ ಮಾಡಿದ ವಿದ್ಯುತ್ ಬಿಲ್ಗೆ ದಂಡ ಹಾಕುತ್ತೀರಾ? ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹರಿಹಾಯ್ದರು.
ಮನೆಗೆ ತೆಗೆದುಕೊಂಡಿರುವ 33 ಕೆವಿ ಸೇರಿ 68 ಸಾವಿರ ರೂ. ಹಾಕಿದ್ದಾರೆ. ಒಬ್ಬ ಮಾಜಿ ಸಿಎಂಗೆ ಹೀಗೆ ಆದರೆ ಸಾಮಾನ್ಯ ಜನರಿಗೆ ಕಥೆ ಏನು?. ನಾನು ವಿದ್ಯುತ್ ಮಹಜರು ಕಾಪಿ ನೀಡುವಂತೆ ಕೇಳಿದ್ದೇನೆ. ನನಗೆ ಕರೆಂಟ್ ಕಳ್ಳ ಅಂತ ಲೇಬಲ್ ಬೇರೆ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.