Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಿಸಲು ಆದೇಶ

ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಿಸಲು ಆದೇಶ

ಬೆಂಗಳೂರು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಆದುದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾ ಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ ಸೇವಾ ಅವಧಿಯ ನಾಮಫಲಕಗಳು ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಯೇ ಪ್ರದರ್ಶಿಸುವಂತೆ ಸೂಚಿಸಿದೆ.
ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯ ವಾಗಿ ಕನ್ನಡ ಭಾಷೆಯು ಶೇ. 60 ರಷ್ಟು ನಾಮಫ ಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇ. 40 ರಷ್ಟು ಆಂಗ್ಲ ಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಆದೇಶಿಸಿದ್ದಾರೆ.

 

 

Megha News