Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local News

ಜಿಲ್ಲಾ ಪೋಲಿಸ್ ಮೈದಾನದಲ್ಲಿ ಹುತಾತ್ಮರ ದಿನ ಆಚರಣೆ

ಜಿಲ್ಲಾ ಪೋಲಿಸ್ ಮೈದಾನದಲ್ಲಿ ಹುತಾತ್ಮರ ದಿನ ಆಚರಣೆ

ರಾಯಚೂರು. ಪೊಲೀಸ್‌ ಹುತಾತ್ಮರ ದಿನ ನಿಮಿತ್ತ ಜಿಲ್ಲಾ ಪೋಲಿಸ್ ಮೈದಾನದಲ್ಲಿ ಹುತಾತ್ಮಕರ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವುದರ ಮೂಲಕ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಣೆ ಮಾಡಲಾಯಿತು.

ನಗರದ ಜಿಲ್ಲಾ ಪೋಲಿಸ್ ಮೈದಾನದ ಆವರಣದಲ್ಲಿ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಕೆ. ನಿತೀಶ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶಿವಕುಮಾರ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ( ಅಪರಾಧ ವಿಭಾಗ) ಜಿ.ಹರೀಶ್‌ ಅವರು ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಪೊಲೀಸ್‌ ಧ್ವಜ ಅರ್ಧಕ್ಕೆ ಇಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.
ಪೊಲೀಸ್‌ ಹುತಾತ್ಮರ ಸ್ಮಾರಕಕ್ಕೆ ಅತಿಥಿಗಳಿಂದ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಪೊಲೀಸ್‌ ಶಸ್ತ್ರಪಡೆಯ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸ್‌ ಹುತಾತ್ಮರಿಗೆ ಗೌರವ ಸಲ್ಲಿಸಿದರು.

Megha News