ರಾಯಚೂರು. ಮಾನ್ವಿಯ ಲಯೋಲಾ ಶಾಲೆಯ ಬಸ್ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಕಪಗಲ್ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರ ಎನ್ಎಸ್ ಬೋಸರಾಜು ಅವರು ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ, ಯೋಗಕ್ಷೇಮವನ್ನು ವಿಚಾರಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊ ಬ್ಬ ಮಕ್ಕಳನ್ನು ಸಚಿವರು ಮಾತನಾಡಿಸಿ ಕುಷಲೋಪರಿ ವಿಚಾರಿಸಿ ವೈದ್ಯರುಗಳಿಂದ ಆರೋಗ್ಯದ ಸ್ಥಿತಿ ಕುರಿತು ಮಾಹಿತಿ ಪಡೆದರು.
ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸಾ ಸೌಲಭ್ಯವಿರುವ ಆಸ್ಪತ್ರೆಗಳಿಗೆ ಮಕ್ಕಳನ್ನ ವರ್ಗಾಯಿಸುವಂತೆ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದರು.
ಮಕ್ಕಳನ್ನು ಜಾಗರೂಕತೆಯಿಂದ ವೈದ್ಯರು ಚಿಕಿತ್ಸೆಯನ್ನು ನೀಡಬೇಕೆಂದು ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಜಯಣ್ಣ, ಕೆ ಶಾಂತಪ್ಪ, ಜಿಂದಪ್ಪ, ನಗರಸಭೆ ಉಪಾಧ್ಯಕ್ಷ ಸಾಜಿದ್ ಸಮೀರ್, ನರಸಿಂಹಲು ಮಾಡಗಿರಿ, ನಿರ್ಮಲಾ ಬೆಣ್ಣಿ, ಬಸವರಾಜ ಪಾಟೀಲ್ ಅತ್ತನೂರು, ರಿಮ್ಸ್ ಡೀನ್ ರಮೇಶ್, ಡಾ. ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.