ರಾಯಚೂರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಅವರು ಜನವರಿ 18ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 8.30 ಗಂಟೆಗೆ ಹೈದ್ರಾಬಾದನಿಂದ ನಿರ್ಗಮಿಸಿ ರಸ್ತೆ ಮೂಲಕ 11.30ಕ್ಕೆ ರಾಯಚೂರಗೆ ಆಗಮಿಸಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಬಳಿಕ
ಮಧ್ಯಾಹ್ನ 3 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೃಷ್ಣಗೌಡ ತಾಯಣ್ಣವರು ತಿಳಿಸಿದ್ದಾರೆ.