Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local News

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟದ ದೂರು ಬಂದಲ್ಲಿ ಸೂಕ್ತ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟದ ದೂರು ಬಂದಲ್ಲಿ ಸೂಕ್ತ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ರಾಯಚೂರು.ಸರ್ಕಾರದಿಂದ ನೀಡಲಾಗುವ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾದ ಬಗ್ಗೆ ದೂರುಗಳು ಬಂದಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಹಕರಿಗೆ ಮಾಪನಗಳಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಅವುಗಳನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಆಹಾರ ಮತ್ತು ಸಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಯರಮರಸ್ ವಸತಿ ಗೃಹದ ಸಭಾಂಗಣದಲ್ಲಿ ಹಮ್ಮಿಕೊಮಡಿದ್ದ ಜಿಲ್ಲೆಯ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರಕಾರದ ಯೋಜನೆಗಳ ಅನುಕೂಲತೆಯು ಜಿಲ್ಲೆಯ ಕಟ್ಟಕಡೆಯ ವ್ಯಕಿಗೂ ತಲುಪಬೇಕು ಮತ್ತು ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ಸೂಕ್ತ ಪರಿಶೀಲನೆ ನಡೆಸಬೇಕು ಮತ್ತು ಅನ್ನಭಾಗ್ಯ ಯೋಜನೆ ಕಟ್ಟಕಡೆಯ ವ್ಯಕ್ತಿಗೂ ತಲುಪುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ 12,265 ಬಿಪಿಎಲ್ ಮತ್ತು 774 ಎಪಿಎಲ್ ಪಡಿತರ ಚೀಟಿ ವಿತರಣೆ ಬಾಕಿಯಿದ್ದು, ಕೂಡಲೇ ಅವುಗಳ ವಿತರಣೆ ಮಾಡಲು ಕ್ರಮಕೈಗೊಳ್ಳಬೇಕು, ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಧಾನ್ಯಗಳನ್ನು ದುರುಪಯೋಗ ಪಡಿಸಿಕೊಂಡವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆಯ ಧಾನ್ಯಗಳನ್ನು ದುರುಪಯೋಗ ಪಡಿಸಿಕೊಂಡ ಕುರಿತು 2022-23ನೇ ಸಾಲಿನಲ್ಲಿ 17 ಹಾಗೂ 2023ರಿಂದ ಇಲ್ಲಿಯವರೆಗೆ 8 ಸೇರಿ ಒಟ್ಟು 25 ಪ್ರಕರಣಗಳನ್ನು ದಾಖಲಿಸಲಾಗಿದೆ. ಇನ್ನು ಹೆಚ್ಚಿನ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Megha News