ರಾಯಚೂರು: 5ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳ ಪೋಷಕರ ಸಹಕಾರ ಅಗತ್ಯವಾಗಿರುತ್ತದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ಹೇಳಿದರು.
ನಗರದ ಕೆ.ಇ.ಬಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನವ ಹಕ್ಕುಗಳ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಖಾಯಿಲೆ ಬಾರದಂತೆ ಮುಂಜಾಗೃತಾ ಕ್ರಮವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತಿದ್ದು, ಇಂದು ಬೂತ್‍ಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಮಾ.4ರಿಂದ ಮಾ.6ರವರೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಲಾಗುತ್ತದೆ ಎಂದು ತಿಳಿಸಿದರು.
ಇದಕ್ಕೂ ಮೊದಲು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಮಾತನಾಡಿ, ಪೋಲಿಯೋ ಖಾಲಯಿಲೆಯು ಮುಂಜಾಗೃತಾ ಕ್ರಮಗಳನ್ನು ವಹಿಸಿಕೊಳ್ಳುವಂತಹ ಖಾಯಿಲೆಯಾಗಿದ್ದು, ಪೋಲಿಯೋ ಕಾಯಿಲೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.
ಇದೇ ವೇಳೆ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ಚೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ತಹಶೀಲ್ದಾರ ಸುರೇಶ ವರ್ಮಾ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಶಾಕೀರ ಮೊಯಿನುದ್ದಿನ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಕುಮಾರ, ಅಕ್ಷರ ದಾಸೋಹ ಅಧಿಕಾರಿ ಈರಣ್ಣ, ಚಂದ್ರಕಾಂತ, ಮಹೇಶ, ಮಂಜುನಾಥ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Megha News > Health & Fitness > ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ 5ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ: ಸಚಿವ ಎನ್.ಎಸ್ ಬೋಸರಾಜು
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ 5ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ: ಸಚಿವ ಎನ್.ಎಸ್ ಬೋಸರಾಜು
tayappa_editor03/03/2024
posted on
Leave a reply