Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನ ಚುರುಕುಗೊಳಿಸಿ: ಸಚಿವ ಎನ್‌ ಎಸ್‌ ಬೋಸರಾಜು

ರಾಯಚೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನ ಚುರುಕುಗೊಳಿಸಿ: ಸಚಿವ ಎನ್‌ ಎಸ್‌ ಬೋಸರಾಜು

ಬೆಂಗಳೂರು: ರಾಯಚೂರು ಜಿಲ್ಲೆಗೆ ಸಂಭಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ *ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಹಾಗೂ ರಾಯಚೂರು ಸಂಸದರಾದ ಜಿ. ಕುಮಾರ್‌ ನಾಯಕ್‌ ಅವರ ಸಮಕ್ಷದಲ್ಲಿ* ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೊಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಯಿತು.

ಸೂರತ್‌ – ಚೆನ್ನೈ, ಹುನಗುಂದ – ರಾಯಚೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿಯನ್ನು ಪಡದುಕೊಂಡರು. ಹುನಗುಂದ – ರಾಯಚೂರು ಆರ್ಥಿಕ ಕಾರಿಡಾರ್‌ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ. ಅದನ್ನ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಇರುವಂತಹ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಶಿಥಿಲವಾಗಿದೆ. ಭಾರೀ ಗಾತ್ರದ ವಾಹನಗಳು ಓಡಾಟದಿಂದ ತೊಂದರೆ ಆಗುವ ಸಾಧ್ಯತೆಗಳೀವೆ. ಇದರಿಂದ ನೂತನವಾಗಿ ಕಟ್ಟಲಾಗುತ್ತಿರುವ ಸೇತುವೆ ಕಾಮಗಾರಿಯನ್ನು ಮುಂದಿನ ನವೆಂಬರ್‌ ಒಳಗಾಗಿ ಮುಗಿಸುವಂತೆ ಸೂಚನೆ ನೀಡಿದರು.
ರಾಯಚೂರು ನಗರದ ಒಳಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 167 ಕೃಷ್ಣಾ ಗಂಜ ವೃತ್ತದಿಂದ ಕೃಷ್ಣ ಸೇತುವೆಯವರೆಗೆ ಯೋಜಿಸಲಾದ ರಸ್ತೆ ಅಭಿವೃದ್ದಿಯ ಕಾಮಗಾರಿಯ ಬಗ್ಗೆ ಮಾಹಿತಿಯನ್ನ ಸಚಿವರು ಪಡೆದುಕೊಂಡರು. ಚೆನ್ನೈ – ಸೂರತ್‌ ಮತ್ತು ರಾಯಚೂರು – ಹುನಗುಂದ ರಾಷ್ಟ್ರೀಯ ಹೆದ್ದಾರಿ ನಗರದ ಹೊರವಲಯದಲ್ಲಿ ಹಾದುಹೋಗಿತ್ತಿವೆ. ಇದರಿಂದ ನಗರದ ಒಳಭಾಗದಲ್ಲಿ ಹಾದುಹೋಗುವ ಹೆದ್ದಾರಿ 167 ನ ಕಾಮಗಾರಿಯ ಬಗ್ಗೆ ಇನ್ನು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಇದು ರಾಯಚೂರು ನಗರ ಪ್ರಮುಖ ರಸ್ತೆಯಾಗಿದೆ. ಕೈಗಾರಿಕಾ ಪ್ರದೇಶ, ಆಸ್ಪತ್ರೆ, ಮಾರುಕಟ್ಟೆ ಹಾಗೂ ಹೈದರಾಬಾದ್‌ ಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಇದರ ಅಭಿವೃದ್ದಿಯಿಂದ ಮಾತ್ರ ನಗರದಲ್ಲಿನ ಸಂಚಾರ ದಟ್ಟಣೆಯನ್ನು ನಿಭಾಯಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಪ್ರಾರಂಭಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಅಗತ್ಯ ಮನವಿ ಸಲ್ಲಿಸುವಂತೆ ಸೂಚಿಸಲಾಯಿತು. ಅಗತ್ಯವಿದ್ದಲ್ಲಿ ಸಚಿವರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ರಾಯಚೂರಿನ ಆರ್‌ಟಿಓ ವೃತ್ತದಲ್ಲಿ ರಸ್ತೆ ದುರಸ್ತಿಗಾಗಿ ಇದ್ದಂತಹ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳ ಸಹಾಯದಿಂದ ತಕ್ಷಣ ಕಾಮಗಾರಿಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂದಿನ ತಿಂಗಳ ಮೊದಲ ವಾರ ಇದೆ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಸಭೆ ನಡೆಸಲಾಗುವುದು. ಅಷ್ಟರ ಒಳಗೆ ಒಂದು ಸಭೆಯಲ್ಲಿ ನೀಡಿದ ಸೂಚನೆ ಗಳನ್ನ ಅನುಷ್ಠಾನಗೋಕಿಸುವಂತೆ ಸೂಚಿಸಿದರು.
ಸಭೆಯಲ್ಲಿ‌ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲೋಕೋಪಯೋಗಿ ಮತ್ತು ಕೈಗಾರಿಕಾ ಇಲಾಖೆಯ ಸೆಲ್ವಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಜೆಕ್ಟ್ ಡೈರೆಕ್ಟರ್, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಸೇರಿದಂತೆ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು.

Megha News