ರಾಯಚೂರು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ನಾಳೆ (ಅ.13ರ ರವಿವಾರ) ರಾಯಚೂರು ಜಿಲ್ಲೆಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅವರ ಪ್ರವಾಸದ ವಿವರ ಇಂತಿದೆ.
ಅವರು ಅ.13ರ ರವಿವಾರ ಬೆಳಿಗ್ಗೆ 11ಗಂಟೆಗೆ ಶಹಾಪೂರದಿಂದ ನಿರ್ಗಮಿಸಿ ಬೆಳಿಗ್ಗೆ 12.30ಗಂಟೆಗೆ ರಾಯಚೂರು ನಗರಕ್ಕೆ ಆಗಮಿಸಲಿದ್ದು, ರಾಯಚೂರು ನಗರದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 5ಗಂಟೆಗೆ ರಾಯಚೂರಿನಿಂದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.