ರಾಯಚೂರು,ರಿ.೨೭- ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರದಿಂದ ನೀಡುವ ಅನುದಾನದದಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ಹೆಸರಲ್ಲಿ ಲಕ್ಷಾಂತರ ರೂ. ಹಣದುರ್ಬಳಕೆ ಮಾಡಿಕೊಂಡಿರುವ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯತಿಯ ಇಬ್ಬರು ಮಹಿಳಾ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಲಾಗಿದೆ.
ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಕಾವೇರಿ ಹಾಗೂ ಹಾಲಿ ಅಧ್ಯಕ್ಷೆ ಈರಮ್ಮ ಸದಸ್ಯತ್ವ ರದ್ದುಗೊಳಿಸಲಾಗಿದೆ. ಜೊತೆಗೆ ಮುಂದಿನ ೬ ವರ್ಷಗಳವರೆಗೆ ಇಬ್ಬರೂ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ.
೧೫ನೇ ಹಣಕಾಸಿನ ಯೋಜನೆ ಮಾರ್ಗಸೂಚಿ ಉಲ್ಲಂಘಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಒಟ್ಟು ೧೬ ಲಕ್ಷ ೯೬ ಸಾವಿರ ರೂ. ಹಣ ದುರ್ಬಳಕೆಯಾಗಿರುವದು ತನಿಖೆಯಿಂದ ಸಾಬೀತಾಗಿರುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯತ್ವ ಸ್ಥಾನ ರದ್ದು ಮಾಡಿ ಆದೇಶಿಸಲಾಗಿದೆ.
ಉಟಕನೂರು ಗ್ರಾಪಂ ಪಿಡಿಓ ರಾಮಪ್ಪ ನಡಗೇರಿ ವಿರುದ್ದ ಇಲಾಖೆ ವಿಚಾರಣೆ ನಡೆಯುತ್ತಿದೆ.ವಿಚಾರಣಾ ವರದಿ ಅನ್ವಯ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಸಿಇಓಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಆದೇಶಿಸಿದ್ದಾg
Megha News > Local News > ೧೫ನೇ ಹಣಕಾಸು ಯೋಜನೆ ಅನುದಾನ ದುರ್ಬಳಕೆ; ಉಟಕನೂರು ಪಂಚಾಯ್ರಿಯ ಇಬ್ವರು ಮಹಿಳಾ ಸದಸ್ಯರ ಸದಸ್ಯತ್ವ ಅನರ್ಹ
೧೫ನೇ ಹಣಕಾಸು ಯೋಜನೆ ಅನುದಾನ ದುರ್ಬಳಕೆ; ಉಟಕನೂರು ಪಂಚಾಯ್ರಿಯ ಇಬ್ವರು ಮಹಿಳಾ ಸದಸ್ಯರ ಸದಸ್ಯತ್ವ ಅನರ್ಹ
Tayappa - Raichur27/01/2025
posted on

Leave a reply