ರಾಯಚೂರು. ಟಿಪ್ಪು ಸುಲ್ತಾನ್ ಭಾವಚಿತ್ರ ವಿರುವ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿ ದಂತೆ ಮುಸ್ಲಿಂ ಸಮಾಜದ ಮುಖಂಡರು ಬೃಹತ್ ಪ್ರತಿಭಟನೆ ಮಾಡುವ ಮೂಲಕ ಟೈರ್ಗಳಿಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಮಟನ್ ಮಾರ್ಕೇಟ್ ಬಳಿ ಇರುವ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಮುಸ್ಲಿಂ ಸಮಾಜದ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಸಂಚಾರ ಬಂದ್ ಆಗಿ ಅಸ್ತವ್ಯಸ್ತ ಗೊಂಡಿತು.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ.