ರಾಯಚೂರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು 9 ತಿಂಗಳ ಬಳಿಕ ಕೊನೆಗೂ ನಿಗಮ ಮಂ ಡಳಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 34 ಜನರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಜಿಲ್ಲೆಯ 3 ಜನ ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾ ನಗಳನ್ನು ಮುಂದಿನ ಎರಡು ವರ್ಷಕ್ಕೆ ಅಥವಾ ಮುಂದಿನ ಆದೇಶ ಬರುವರೆಗೂ ಅಧ್ಯಕ್ಷರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಜಿಲ್ಲೆಯ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರು ನಿಗಮ, ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೆಂದು ಹೇಳಿದ್ದು, ಸರಕಾರ ನೀಡಿದರೂ ಅದನ್ನು ಸ್ವೀಕರಿಸುವುದಿಲ್ಲ ಎಂದು ಬಹಿರಂಗವಾಗಿ ಪತ್ರಿಕಾ ಗೋಷ್ಠಿ ಮೂಲಕ ಹೇಳಿದ್ದರು, ಇದೀಗ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷನ್ನಾಗಿ ನೇಮಿಸಕಾಗಿದೆ.
ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಅವರಿಗೆ ಮೊದಲ ಬಾರಿಗೆ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನೀಡಲಾಗಿದೆ, ಹಾಗೂ ಬಸವನಗೌಡ ತುರ್ವಿಹಾಳ ಅವರಿಗೂ ಸಹ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯಗ ಮಂಡಳಿ ಅಧ್ಯಕ್ಷ ಸ್ಥಾನ ಒದಗಿ ಬಂದಿದೆ.
ಶಾಸಕರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೇಮಕಾತಿಯಲ್ಲಿ ಜಿಲ್ಲೆಯ 4 ಜನ ಕಾಂಗ್ರೆಸ್ ಶಾಸಕ ಪೈಕಿ 3 ಜನರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.